ಉನ್ನತ ಶಿಕ್ಷಣ ಅಧ್ಯಯನದಲ್ಲಿ ತಂತ್ರಜ್ಞಾನ ಬಳಸಿ

| Published : Aug 03 2025, 01:30 AM IST

ಸಾರಾಂಶ

ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜಿಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ. ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ವಿಚಾರಗಳನ್ನು ಬೆಳೆಸಬೇಕು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಉನ್ನತ ಶಿಕ್ಷಣ ಪಡೆಯುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನವನ್ನುಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದು ಜೈನ್ ಡೀಮ್ಡ್ ಟು ಬಿ ವಿಶ್ವ ವಿದ್ಯಾಲಯದ ಪ್ರೊ.ಎಂ.ಎ. ಬಿದ್ದಪ್ಪ ಹೇಳಿದರು.

ನಗರದ ಎಂಜಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಸ್ಯ ಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ ಸಂಶೋಧನಾ ಕಮ್ಮಟ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ನಿರಂತರ ಅರಿವಿನ ವಿಸ್ತಾರಕ್ಕಾಗಿ ಪ್ರಯತ್ನಿಸಬೇಕು ಎಂದರು.

ಅಧ್ಯಯನದದಲ್ಲಿ ತಂತ್ರಜ್ಞಾನ ಬಳಸಿ

ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜಿಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ. ಉನ್ನತ ಶಿಕ್ಷಣದಲ್ಲಿ ಬೋಧಕರು ತಮ್ಮ ಬೋಧನೆಯ ಜೊತೆ ಜೊತಗೆ ವಿದ್ಯಾರ್ಥಿಗಳಲ್ಲಿ ಸಂಶೋಧನಾತ್ಮಕ ಮತ್ತು ವಿಮರ್ಶಾತ್ಮಕ ವಿಚಾರಗಳನ್ನು ಬೆಳೆಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲೆ ಡಾ.ವಸುಂಧರ ಮಾತನಾಡಿ, ವಿದ್ಯಾರ್ಥಿಗಳು ಎಲ್ಲ ಬಗೆಯ ಜ್ಞಾನವನ್ನು ಪಡೆದುಕೊಳ್ಳುವತ್ತ ಗಮನ ಹರಿಸಬೇಕು. ತಾವು ಆಯ್ಕೆ ಮಾಡಿದ ವಿಷಯದ ಕುರಿತಲ್ಲದೆ, ಬೇರೆ ಕೋರ್ಸಿಗೆ ಸಂಬಂಧಪಟ್ಟ ವಿಷಯಗಳನ್ನೂ ಅರಿತುಕೊಳ್ಳುವಲ್ಲಿ ಪ್ರಬುದ್ಧರಾಗಬೇಕು. ಆಗ ನಿಮ್ಮನ್ನು ನೀವು ಹೆಚ್ಚು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಸಾಧ್ಯವಾಗುತ್ತದೆ. ಯುಪಿಎಸ್ ಸಿ ಯಂತಹ ಪರೀಕ್ಷೆಗಳನ್ನು ತಿಳಿದುಕೊಳ್ಳುವುದಕ್ಕಾದರೂ ಬರೆಯುವ ಪ್ರಯತ್ನದ ಕಡೆಗೆ ನಿಮ್ಮ ಗಮನವನ್ನು ಹರಿಸುತ್ತಾ, ಅದರ ಅಗತ್ಯವನ್ನು ಕಂಡುಕೊಂಡು ಓದಿನತ್ತ ಗಮನ ಹರಿಸಬೇಕು ಎಂದರು.

ಬೋಧನಾ ಪದ್ಧತಿಯ ಆವಿಷ್ಕಾರ

ಐಕ್ಯುಎಸಿ ಸಂಯೋಜಕಿ ಡಾ.ಪುಟ್ಲೂರು ಸುನಿತ ಮಾತನಾಡಿ, ಪದವಿ ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿಗಳ ಪ್ರಗತಿಗೆ ಪೂರಕವಾದ ಕೌಶಲ್ಯಗಳನ್ನು ಬಳಸಿಕೊಂಡು ಬೋಧಕರು ತಮ್ಮ ಬೋಧನೆಯಲ್ಲಿ ಹೊಸಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿ ಬೋಧನೆ ಮಾಡಬೇಕು. ಇದರಿಂದ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸಸ್ಯ ಶಾಸ್ತ್ರ ವಿಭಾಗ ಮುಖ್ಯಸ್ಥ ಬಿ.ಆರ್.ಕಾರ್ತಿಕ್, ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಡಾ. ವೆಂಕಟೇಶ್ , ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಬಾಲಸುಬ್ರಮಣ್ಯಂ , ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥ ಆನಂದ್, ಉಪನ್ಯಾಸಕರಾದ ಮುಯಿನಾಬಾನು, ಸಾದಿಕ್ ಪಾಷ, ವಿದ್ಯಾರ್ಥಿಗಳು ಇದ್ದರು.