ಸಾರಾಂಶ
ಪಡುಬೆಳ್ಳೆ ಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಕ್ರೀಡಾಪಟು ಅಶ್ವಿನ್ ಸನಿಲ್ ಕ್ರೀಡಾ ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಕಾಪು
ಪಡುಬೆಳ್ಳೆ ಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಕ್ರೀಡಾಪಟು ಅಶ್ವಿನ್ ಸನಿಲ್ ಕ್ರೀಡಾ ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಶಾಲೆಗಳಲ್ಲಿ ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡಾಳುಗಳು ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿಯನ್ನು ಮೆರೆಯುವುದು ಮುಖ್ಯ. ಇತ್ತೀಚೆಗೆ ಸರ್ಕಾರ ಕ್ರೀಡೆಗೆ ಹೆಚ್ಚಿನ ಗಮನ ನೀಡುತ್ತಿರುವುದರಿಂದ, ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕ್ರೀಡಾಳುಗಳಿಗೆ ಕರೆ ನೀಡಿದರು.ಶಾಲಾ ಆಡಳಿತ ಮಂಡಳಿ ಸದಸ್ಯ ಶಿವಾಜಿ ಎಸ್. ಸುವರ್ಣ ಧ್ವಜಾರೋಹಣ ನೆರವೇರಿಸಿದರು. ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಕಟಪಾಡಿ ಶಂಕರ ಪೂಜಾರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಆಡಳಿತ ಮಂಡಳಿ ಸದಸ್ಯರಾದ ಗೀತಾ ವಾಗ್ಲೆ ಬಂಟಕಲ್ಲು, ಸುರೇಶ ಪೂಜಾರಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಭವ್ಯಾ ಆರ್. ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕ ರಾಘವೇಂದ್ರ ಸಾಲಿಯಾನ್ ಸ್ವಾಗತಿಸಿದರು. ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಉಷಾ ಎಸ್. ವಂದಿಸಿದರು. ಶಿಕ್ಷಕಿಯರಾದ ರಿನುಷಾ, ದೀಕ್ಷಾ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುರೇಶ್ ದೇವಾಡಿಗ, ಸ್ವಾತಿ ಕ್ರೀಡಾಕೂಟ ಸಂಯೋಜಿಸಿದ್ದರು.