ಉಟಕನೂರು ಅಡವಿ ಸಿದ್ದೇಶ್ವರ ಮಠದ ಜಾತ್ರೆ

| Published : Feb 04 2024, 01:30 AM IST

ಸಾರಾಂಶ

ಸಮೀಪದ ಉಟಕನೂರು ಅಡವಿ ಸಿದ್ದೇಶ್ವರ ಮಠದ ಜಾತ್ರೆ ಪ್ರಯುಕ್ತ ಶನಿವಾರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.

ಕವಿತಾಳ: ಸಮೀಪದ ಉಟಕನೂರು ಅಡವಿ ಸಿದ್ದೇಶ್ವರ ಮಠದ ಜಾತ್ರೆ ಪ್ರಯುಕ್ತ ಶನಿವಾರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.

ಜಾತ್ರೆಯಲ್ಲಿ ಉಟಕನೂರು, ಬೆಳವಾಟ, ಮರಕಂದಿನ್ನಿ, ಮಲ್ಕಾಪುರ, ತೋರಣದಿನ್ನಿ, ಹಾಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಮರಿ ಬಸವಲಿಂಗ ತಾತನವ 33ನೇ ಪುಣ್ಯಸ್ಮರಣೆ ನಿಮಿತ್ಯ ಕತೃ ಗದ್ದುಗೆಗೆ ರುದ್ರಾಭಿಷೇಕ, ಮಹಾ ಮಂಗಳಾರತಿ ಮತ್ತಿತರ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ನಂದಿಕೋಲು ಮೆರವಣಿಗೆ, ಪಲ್ಲಕ್ಕಿ ಉತ್ಸವ ನಡೆಯಿತು. ಭಕ್ತರು ಕಾಯಿ ಕರ್ಪೂರ ಸಮರ್ಪಿಸಿ ಹರಕೆ ತೀರಿಸಿದರು.

ಮರಿಬಸವಲಿಂಗ ತಾತನವರ ಮೂರ್ತಿಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಜರುಗಿತು.

ಮಠದ ಪೀಠಾಧಿಪತಿ ಮರಿನಸವರಾಜ ದೇಶೀಕೇಂದ್ರ ಸ್ವಾಮೀಜಿಗಳ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಹೂವಿನ ರಥೋತ್ಸವಕ್ಕೆ ಚಾಲನೆ ನೀಡಲಾಯಿತು, ಈ ಸಂದರ್ಭದಲ್ಲಿ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು. ಮಠದಲ್ಲಿ ಪ್ರಸಾದ ಭಕ್ತರಿಗೆ ವ್ಯವಸ್ಥೆ ಮಾಡಲಾಗಿತ್ತು.