ಸಾರಾಂಶ
ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನಸಭಾ ಅಧ್ಯಕ್ಷ ಸತೀಶ್ ಮಹಾನ ಅವರನ್ನು ಭೇಟಿಯಾದರು.
ಕನ್ನಡಪ್ರಭ ವಾರ್ತೆ ಮಂಗಳೂರುಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನಸಭಾ ಅಧ್ಯಕ್ಷ ಸತೀಶ್ ಮಹಾನ ಅವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.ಉತ್ತರ ಪ್ರದೇಶ ವಿಧಾನ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ ಪರಿಷತ್‌ನ ಕಾರ್ಯದರ್ಶಿ ಮಹಾಲಕ್ಷ್ಮೀ ಹಾಗೂ ಇತರ ಹಿರಿಯ ಅಧಿಕಾರಿಗಳು ಇದ್ದರು.