ಮೀನುಗಾರರ ಬೆಂಬಲಕ್ಕೆ ನಿಂತ ಪರಿಸರ ಹೋರಾಟಗಾರ್ತಿತಾಲೂಕಿನ ಕಾಸರಕೋಡ ಟೊಂಕಕ್ಕೆ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಭೇಟಿ ನೀಡಿದ್ದು, ಇದರಿಂದ ವಾಣಿಜ್ಯ ಬಂದರು ವಿರೋಧಿ ಹೋರಾಟಕ್ಕೆ ಹೊಸ ತಿರುವು ಸಿಕ್ಕಿದೆ. ಇಲ್ಲಿನ ಮೀನುಗಾರರು, ಹೋರಾಟದ ಪ್ರಮುಖರನ್ನು ಭೇಟಿ ಮಾಡಿ ವಿಸ್ತೃತ ಚರ್ಚೆ ನಡೆಸುವ ಮೂಲಕ ವಸ್ತುಸ್ಥಿತಿ ಅರಿಯುವ ಪ್ರಯತ್ನ ಮಾಡಿದರು.