ಭಟ್ಕಳದ ನುಡಿಜಾತ್ರೆ ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮನವಿಅಳ್ವೆಕೋಡಿಯಲ್ಲಿ ಸಾಹಿತಿ ನಾರಾಯಣ ಯಾಜಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಲ್ಲ ಕನ್ನಡದ ಮನಸುಗಳು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಮನವಿ ಮಾಡಿದರು.