ನೈತಿಕ ಶಿಕ್ಷಣಕ್ಕಾಗಿ ಭಗವದ್ಗೀತಾ ಅಭಿಯಾನ: ಡಾ. ಶಂಕರ ಭಟ್ಟ ಬಾಲೀಗದ್ದೆಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಶಿಕ್ಷಣದ ವಿದ್ಯಾರ್ಥಿಗಳಿಗೆ ಮೂರು ಹಂತಗಳಲ್ಲಿ ೭ ಸ್ಪರ್ಧೆಗಳು ನಡೆಯಲಿವೆ. ಡಿ. ೨ರಂದು ೧೦ ಗಂಟೆಗೆ ತಾಲೂಕು ಮಟ್ಟದ ಸ್ಪರ್ಧೆಗಳು ನಾಯಕನಕೆರೆ ಶಾರದಾಂಬಾ ಸಭಾಭವನದಲ್ಲಿ, ಜಿಲ್ಲಾ ಮಟ್ಟದ ಸ್ಪರ್ಧೆಗಳು ಡಿ. ೭ರಂದು ಶಿರಸಿಯ ಲಯನ್ಸ್ ಶಾಲೆಯಲ್ಲಿ, ಡಿ. ೧೧ರಂದು ರಾಜ್ಯಮಟ್ಟದ ಸ್ಪರ್ಧೆಗಳು ವಿಜಯಪುರದಲ್ಲಿ ಶ್ರೀಗಳ ಸಮ್ಮುಖದಲ್ಲಿ ನಡೆಯಲಿದೆ.