ಶಿರಸಿಯ ನಗರಸಭೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದಸ್ಯರ ವಾಗ್ವಾದನಗರೋತ್ಥಾನದ ಗುತ್ತಿಗೆ ಪಡೆದ ಕಂಪನಿಯವರಲ್ಲಿ ಕೆಲಸಗಾರರಿಲ್ಲ. ಕಾಟಾಚಾರಕ್ಕೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲವೊಂದು ಕಡೆ ಅರ್ಧಂಬರ್ಧ ಕಾಮಗಾರಿ ಕೈಗೊಳ್ಳಲಾಗಿದ್ದು, ಇದರಿಂದ ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಸದಸ್ಯರು ಆರೋಪಿಸಿದರು.