ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆಉತ್ತರ ಕನ್ನಡ ಜಿಲ್ಲೆಯಲ್ಲಿ ಮಾ. 21ರಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು. ಈ ಬಾರಿಯ ಪರೀಕ್ಷೆಗೆ ಜಿಲ್ಲೆಯ 125 ಸರ್ಕಾರಿ, 150 ಅನುದಾನಿತ, 92 ಅನುದಾನ ರಹಿತ, 25 ವಸತಿ ಶಾಲೆಗಳ ಒಟ್ಟು 20,035 ವಿದ್ಯಾರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.