ಕುಡಿವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ: ಮಂಕಾಳ ವೈದ್ಯಜೋಯಿಡಾ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಸಲು ಹಿಂದೇಟು ಹಾಕಬಾರದು. ಬಡಜನರಿಗೆ ಅಗತ್ಯ ಸೌಲಭ್ಯ ನೀಡಬೇಕು, ತಾಂತ್ರಿಕ ಕಾರಣ ಹೇಳಬಾರದು. ಹಿಂದುಳಿದ, ಬಡ ಜನರು ಕಚೇರಿಗೆ ಬಂದಾಗ ಕೆಲಸ ತ್ವರಿತವಾಗಿ ಮಾಡಿಕೊಡಬೇಕು ಎಂದು ಸಚಿವ ಮಂಕಾಳು ವೈದ್ಯ ಅವರು ತಾಲೂಕಿನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.