ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಮಿತಿ ಮೀರಿದ ಹಸ್ತಕ್ಷೇಪ: ಕಾಗೇರಿಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಮತ್ತು ಆಡಳಿತ ವ್ಯವಸ್ಥೆಯ ಹಸ್ತಕ್ಷೇಪ ಮಿತಿ ಮೀರಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀಮಾತಾ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ದ್ವಿದಶಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ 'ದ್ವಿದಶಮಾನ ಯಾನ' ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.