ಜನಿವಾರ ಪ್ರಕರಣ ಖಂಡಿಸಿ ಸಿದ್ದಾಪುರದಲ್ಲಿ ಮನವಿಸಿಇಟಿ ಪರೀಕ್ಷೆ ವೇಳೆ ಜನಿವಾರ ಕತ್ತರಿಸಿರುವುದು, ಓಲೆ, ಮೂಗುತಿ ತೆಗೆಸಿರುವ ಕ್ರಮ ಖಂಡಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದಲ್ಲಿ ವಿವಿಧ ಸಮಾಜದ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜನಿವಾರ ತೆಗೆಸಿದ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.