ಕುಡಿವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಿಜಿಲ್ಲೆಯ ಯಲ್ಲಾಪುರ, ಮುಂಡಗೋಡು, ದಾಂಡೇಲಿ, ಶಿರಸಿ, ಸಿದ್ದಾಪುರ ತಾಲೂಕುಗಳನ್ನು ಜಿಲ್ಲೆಯ ಅತಿ ಹೆಚ್ಚಿನ ಬರಗಾಲ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ, ಕ್ಷಿಪ್ರಗತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಆದ್ಯತೆ ನೀಡಬೇಕು. ನೀರಿಲ್ಲದ ಸ್ಥಿತಿ ಬಂದೊದಗುವ ಮುನ್ನವೇ ನೀರಿನ ಸಂಪನ್ಮೂಲ ಕಂಡುಕೊಳ್ಳಬೇಕು ಎಂದು ಶಾಸಕ, ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರೂ ಆದ ಶಿವರಾಮ ಹೆಬ್ಬಾರ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.