ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಕೊಡಸಳ್ಳಿ ಡ್ಯಾಂಗೆ ಹೋಗುವ ರಸ್ತೆಯ ಮೇಲೆ ಗುಡ್ಡ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಜ್ಯದ ಪ್ರತಿಯೊಬ್ಬರಿಗೂ ಕಣ್ಣಿನ ಆರೈಕೆ ನೀಡುವ ಮತ್ತು ಅಂಧತ್ವ ಪ್ರಮಾಣದ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ 14 ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗಿದೆ.