ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಲಕ್ಷ್ಮೀಪ್ರಿಯಾಉತ್ತರ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ. 1ರಿಂದ 20ರ ವರೆಗೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ವಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.