ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಮತ್ತದೆ ನಿರಾಸೆರಾಜ್ಯದ 6 ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೋಮವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದು, ಅದರಲ್ಲಿ ಉತ್ತರ ಕನ್ನಡದ ಪ್ರಸ್ತಾಪವೇ ಇಲ್ಲದಿರುವುದರಿಂದ ಜಿಲ್ಲೆಯ ಜನತೆಗೆ ಸದ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೈಗೆಟುಕದಂತಾಗಿದೆ.