ಸಾರಾಂಶ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜು. 8, 10 ಹಾಗೂ 11ರಂದು ಭಾರಿ ಮಳೆಯಾಗಲಿದೆ ಹಾಗೂ ಅಘನಾಶಿನಿ ನದಿ ನೀರಿನ ಮಟ್ಟದಲ್ಲೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಜಿಲ್ಲೆಯ ಕರಾವಳಿಯ 5 ತಾಲೂಕಿಗೆ ಜು. 8ರಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ. ಈ ತಾಲೂಕಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರ ತಾಲೂಕಿನ ಎಲ್ಲ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.