ಸಾರಾಂಶ
ದೊಡ್ಡಬಳ್ಳಾಪುರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗ ಅಧ್ಯಯನಕ್ಕಾಗಿ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ವಿವಿಧ ಸ್ಥಳೀಯ ಸಂಸ್ಥೆಗಳ ಕಾರ್ಯವೈಖರಿ ಅಧ್ಯಯನ ನಡೆಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಕಾರ್ಯಕ್ರಮಗಳಕಾರ್ಯವಿಧಾನಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಪಂ ಅಡಿಯಲ್ಲಿ ಬರುವಪಂಚಾಯಿತಿಯ ಜಿಲ್ಲಾ, ತಾಲೂಕು, ಗ್ರಾಮ ಹಂತಗಳು, ಕೂಸಿನ ಮನೆ, ನರೇಗಾ, ಇ-ಸ್ವತ್ತು, ಗ್ರಾಮಗಳ ಸ್ವಚ್ಛತಾ
ಕಾರ್ಯ ಮತ್ತು ತ್ಯಾಜ್ಯ ವಿಲೇವಾರಿ ಘಟಕ (ಸ್ವಚ್ಛ ಭಾರತ್ ಮಿಷನ್), ಅರಿವು ಕೇಂದ್ರಗಳು(ಗ್ರಂಥಾಲಯ), ಅಮೃತಸರೋವರ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾರ್ಯ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನಗಳ ಬಗ್ಗೆ ವಿವರವಾಗಿ ಮಾಹಿತಿಯನ್ನು ಪಿಪಿಟಿ ಮೂಲಕ ಪ್ರಸ್ತುತ ಪಡಿಸಿದರು.
ಕೂಸಿನ ಮನೆಗೆ ಭೇಟಿ:ನಂತರ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿಯ ಸೇವೆ ಕುರಿತು ಮಾಹಿತಿ ಪಡೆದು, ಘನತ್ಯಾಜ್ಯ ವಿಲೇವಾರಿ ಘಟಕ, ಅರಿವು ಕೇಂದ್ರ, ಕೂಸಿನ ಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ನಗರಸಭೆ ಕಚೇರಿಯಲ್ಲಿ ಸಭೆ:ದೊಡ್ಡಬಳ್ಳಾಪುರ ನಗರಸಭೆಗೆ ಭೇಟಿ ನೀಡಿ ಆಡಳಿತ ವೈಖರಿ, ಕಾರ್ಯವಿಧಾನ, ಆದಾಯ ವಿಧಾನ, ತೆರಿಗೆ, ಕ್ರಿಯಾ
ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ,
ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ನಗರಸಭೆ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಎನ್.ಮಲ್ಲೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ಫೋಟೋ-
21ಕೆಡಿಬಿಪಿ4- ದೊಡ್ಡಬಳ್ಳಾಪುರ ನಗರಸಭೆಗೆ ಭೇಟಿ ನೀಡಿದ್ದ ಉತ್ತರಾಖಂಡ್ ನಿಯೋಗ ಆಡಳಿತ ವೈಖರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.--
21ಕೆಡಿಬಿಪಿ5- ಬೆಂ.ಗ್ರಾ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಉತ್ತರಾಖಂಡ್ ನಿಯೋಗದೊಂದಿಗೆ ಸ್ಥಳೀಯ ಅಧಿಕಾರಿಗಳು ಸಭೆ ನಡೆಸಿದರು.--
21ಕೆಡಿಬಿಪಿ3- ಕೂಸಿನ ಮನೆಗೆ ಭೇಟಿ ನೀಡಿದ ಉತ್ತರಾಖಂಡ್ ನಿಯೋಗ ಮಾಹಿತಿ ಪಡೆದುಕೊಂಡಿತು.