ಸಾರಾಂಶ
ದಕ್ಷಿಣ ಕನ್ನಡ ಜಿಲ್ಲಾ ಸಬ್ ಜೂನಿಯರ್ ಮತ್ತು ಜೂನಿಯರ್ ಕ್ರೀಡಾಕೂಟವನ್ನು ಆಗಸ್ಟ್ 9 ಮತ್ತು 10ರಂದು ಏರ್ಪಡಿಸಲಾಗಿದೆ. ಇದರಲ್ಲಿ ಅಂಡರ್ 9, 11, 13, 15, 17 ಮತ್ತು 19 ವರ್ಷದ ಬಾಲಕರ ಮತ್ತು ಬಾಲಕಿಯರ ಸಿಂಗಲ್ಸ್ ಹಾಗೂ ಡಬಲ್ಸ್ ಕ್ರೀಡಾ ವಿಭಾಗದಲ್ಲಿ ಕ್ರೀಡಾಪಟುಗಳು ಸ್ಪರ್ಧೆಗಿಳಿಯಲಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಟ್ಟದ ಯೂಎಕ್ಸ್ ಸನ್‌ರೈಸ್ ರ್‍ಯಾಂಕಿಂಗ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಜುಲೈ 27ರಿಂದ ಆಗಸ್ಟ್ 2ರವರೆಗೆ ನಗರದ ಉರ್ವ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.19 ವರ್ಷದ ವಯೋಮಿತಿಯ ಹಾಗೂ ಸೀನಿಯರ್ಸ್ ವಿಭಾಗದ ಪುರುಷರ ಹಾಗೂ ಮಹಿಳೆಯರ, ಸಿಂಗಲ್ಸ್, ಡಬಲ್ಸ್ ಮತ್ತು ಮಿಕ್ಸ್‌ಡ್ ಡಬಲ್ಸ್ ಸ್ಪರ್ಧೆ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲಾ ಸಬ್ ಜೂನಿಯರ್ ಮತ್ತು ಜೂನಿಯರ್ ಕ್ರೀಡಾಕೂಟವನ್ನು ಆಗಸ್ಟ್ 9 ಮತ್ತು 10ರಂದು ಏರ್ಪಡಿಸಲಾಗಿದೆ. ಇದರಲ್ಲಿ ಅಂಡರ್ 9, 11, 13, 15, 17 ಮತ್ತು 19 ವರ್ಷದ ಬಾಲಕರ ಮತ್ತು ಬಾಲಕಿಯರ ಸಿಂಗಲ್ಸ್ ಹಾಗೂ ಡಬಲ್ಸ್ ಕ್ರೀಡಾ ವಿಭಾಗದಲ್ಲಿ ಕ್ರೀಡಾಪಟುಗಳು ಸ್ಪರ್ಧೆಗಿಳಿಯಲಿದ್ದಾರೆ ಎಂದು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ರಾಜ್ಯ ಮಟ್ಟದ ಕ್ರೀಡಾಕೂಟಕ್ಕಾಗಿ ಕರ್ನಾಟಕ ರಾಜ್ಯದ ಸುಮಾರು 1,400 ಕ್ಕೂ ಹೆಚ್ಚು ವೃತ್ತಿಪರ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದೆ. ಒಟ್ಟು 9 ದಿನಗಳಲ್ಲಿ ಸುಮಾರು 10 ಸಾವಿರಕ್ಕಿಂತಲೂ ಹೆಚ್ಚು ಪ್ರೇಕ್ಷಕರು ಕ್ರೀಡಾಕೂಟವನ್ನು ವೀಕ್ಷಿಸಲು ಆಗಮಿಸುವ ಸಾಧ್ಯತೆಗಳಿವೆ. ಜುಲೈ 27ರಂದು ಬೆಳಗ್ಗೆ 8.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ ಎಂದರು.ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್ ಕಾರ್ಯದರ್ಶಿ ಸುಪ್ರೀತ್ ಆಳ್ವ, ಜತೆ ಕಾರ್ಯದರ್ಶಿ ದೀಪಕ್ ಕುಮಾರ್, ಕೋಶಾಧಿಕಾರಿ ಲಕ್ಷ್ಮೀ ಪಿ. ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯರಾದ ರಯೀಝ್ ಪಿ.ಸಿ., ರಿಯಾಝ್ ಅಝರ್ ಹಸನ್ ಇದ್ದರು.