ವಿ.ಕೆ.ಜಗದೀಶ್ ಅವರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಎನ್.ಸುಬ್ರಹ್ಮಣ್ಯ

| Published : Mar 16 2025, 01:50 AM IST

ವಿ.ಕೆ.ಜಗದೀಶ್ ಅವರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಎನ್.ಸುಬ್ರಹ್ಮಣ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಲಯನ್ಸ್ ಸಂಸ್ಥೆಯ ವಿವಿಧ ಸ್ಥಾನಗಳಲ್ಲಿ ಕಾರ್ಯ ನಿರ್ವಹಿಸಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜಗದೀಶ್ ತಮ್ಮ ಹುಟ್ಟುಹಬ್ಬವನ್ನು ದುಂದು ವೆಚ್ಚಕ್ಕೆ ಅವಕಾಶ ಮಾಡಿಕೊಡದೆ ಆರೋಗ್ಯ ಶಿಬಿರ ಏರ್ಪಡಿಸಿ ಆಚರಣೆ ಮಾಡಿಕೊಳ್ಳುತ್ತಿರುವುದು ಪ್ರಶಂಸನೀಯವಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮಾನಸ ವಿದ್ಯಾಸಂಸ್ಥೆ ಟ್ರಸ್ಟ್ ಅಧ್ಯಕ್ಷ ವಿ.ಕೆ.ಜಗದೀಶ್ ಉಚಿತ ಆರೋಗ್ಯ ಶಿಬಿರ ಏರ್ಪಡಿಸಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಅವರ ಸಮಾಜಮುಖಿ ಕಾರ್ಯವನ್ನು ತೋರಿಸುತ್ತಿದೆ ಎಂದು ಲಯನ್ಸ್ ಸಂಸ್ಥೆ ಜಿಲ್ಲಾ ರಾಜ್ಯಪಾಲ ಎನ್.ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಮದ್ದೂರು ಕ್ರೀಡಾ ಬಳಗದಲ್ಲಿ ಕೆಂಪೇಗೌಡ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ವಿ.ಕೆ.ಜಗದೀಶ್ ಸ್ವಾತಂತ್ರ್ಯ ಹೋರಾಟಗಾರರಾದ ತಮ್ಮ ತಂದೆ ವಿ.ಕೆ.ಕರಡಿಗೌಡ ಹೆಸರಿನಲ್ಲಿ ಬೆಸಗರಹಳ್ಳಿಯಲ್ಲಿ ಶಿಕ್ಷಣ ಸಂಸ್ಥೆಸ್ಥಾಪಿಸಿ ಗ್ರಾಮೀಣ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಲಯನ್ಸ್ ಸಂಸ್ಥೆಯ ವಿವಿಧ ಸ್ಥಾನಗಳಲ್ಲಿ ಕಾರ್ಯ ನಿರ್ವಹಿಸಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜಗದೀಶ್ ತಮ್ಮ ಹುಟ್ಟುಹಬ್ಬವನ್ನು ದುಂದು ವೆಚ್ಚಕ್ಕೆ ಅವಕಾಶ ಮಾಡಿಕೊಡದೆ ಆರೋಗ್ಯ ಶಿಬಿರ ಏರ್ಪಡಿಸಿ ಆಚರಣೆ ಮಾಡಿಕೊಳ್ಳುತ್ತಿರುವುದು ಪ್ರಶಂಸನೀಯವಾಗಿದೆ ಎಂದರು.

ಸಮಾಜದಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ ಮುಖ್ಯ. ಆರೋಗ್ಯ ಭಾಗ್ಯ ಹೊಂದಿದ್ದರೆ ಯಾವುದೇ ವ್ಯಕ್ತಿ ಜೀವನದಲ್ಲಿ ಹಣ, ಆಸ್ತಿಪಾಸ್ತಿಯೊಂದಿಗೆ ನೆಮ್ಮದಿ ಜೀವನ ನಡೆಸಬಹುದು ಎಂದರು.

ಕಾರ್ಯಕ್ರಮದಲ್ಲಿ ಲಯನ್ ಸಂಸ್ಥೆ. ಕದಂಬ ಲಯನ್ಸ್ ಸಂಸ್ಥೆ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ವಿ.ಕೆ.ಜಗದೀಶ್ ದಂಪತಿಗಳಿಗೆ ಅಭಿನಂದಿಸಲಾಯಿತು. ವರ್ಧಮಾನ್ ಪ್ಯಾರಾ ಮೆಡಿಕಲ್ ಕಾಲೇಜಿನ ಕಾರ್ಯದರ್ಶಿ ಅವಿನಾಶ್, ಲಯನ್ಸ್ ಸಂಸ್ಥೆಯ ಸಿ.ಬಿ.ಕುಮಾರ್, ಎಚ್‌.ಪಿ.ನಾಗರಾಜು, ಪಿ.ಕೆ.ಸುಧಾಕರ್, ಎಸ್.ಬಿ.ನಾಗರಾಜು ಸೇರಿ ಹಲವರು ಪಾಲ್ಗೊಂಡಿದ್ದರು.