ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಹಿರಿಯ ಸಹಕಾರಿ, ಟಿಎಪಿಸಿಎಂಎಸ್‌ನ ನಿರ್ದೇಶಕ ವಿ.ಎಸ್.ನಿಂಗೇಗೌಡರು ಕರ್ನಾಟಕ ಸರ್ಕಾರದ ಸಹಕಾರಿ ಇಲಾಖೆ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.ತಾಲೂಕಿನ ವಡ್ಡರಹಳ್ಳಿ ಗ್ರಾಮದ ವಿ.ಎಸ್.ನಿಂಗೇಗೌಡರು ಕಳೆದ 25 ವರ್ಷಗಳಿಂದಲೂ ಹಲವು ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅಧ್ಯಕ್ಷ, ನಿರ್ದೇಶಕರಾಗಿ 25 ವರ್ಷ, ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ 25 ವರ್ಷಗಳಿಂದ ಅಧ್ಯಕ್ಷ, ನಿರ್ದೇಶಕರಾಗಿ, ಜಿಲ್ಲಾ ಸಹಕಾರ ಯೂನಿಯನ್‌ನಲ್ಲಿ 10 ವರ್ಷಗಳ ಕಾಲ ಅಧ್ಯಕ್ಷ, ನಿರ್ದೇಶಕರಾಗಿ, ಆರ್‌ಬಿಜಿ ಇಫ್ಕೋ ಸಂಸ್ಥೆಯಲ್ಲಿ ಸುಮಾರು 10 ವರ್ಷಗಳ ಕಾಲ ಸದಸ್ಯರಾಗಿ ಸೇವೆ ಮಾಡಿದ್ದಾರೆ.
ಕೆ.ಬೆಟ್ಟಹಳ್ಳಿ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ, ತಾಪಂ ಸದಸ್ಯರಾಗಿ, ಫ್ರೆಂಚ್‌ರಾಕ್ಸ್ ಲಯನ್ಸ್ ಕ್ಲಬ್‌ನಲ್ಲಿ ಕಾರ್ಯದರ್ಶಿ ಹಾಗೂ ಸಕ್ರೀಯ ಸದಸ್ಯರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.ಪ್ರಸ್ತುತ ತಾಲೂಕು ಟಿಎಪಿಸಿಎಂಎಸ್ ಸಂಸ್ಥೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ, ಸಹಕಾರ ಇಲಾಖೆ ಹಾಗೂ ಸಹಕಾರ ಮಹಾಮಂಡಳಿ ನೀಡುವ ಹಲವು ತರಬೇತಿಗಳಲ್ಲಿ ಭಾಗವಹಿಸಿ ಅನುಭವ ಪಡೆದುಕೊಂಡಿದ್ದಾರೆ.
ಇವರ ಈ ಸಾಧನೆ ಗುರುತಿಸಿ ಸಹಕಾರ ಇಲಾಖೆಯೂ ನೀಡುವ ಸಹಕಾರ ರತ್ನ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಇದೇ ನ.14ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಿದೆ.ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ವಿ.ಎಸ್.ನಿಂಗೇಗೌಡರನ್ನು ಕ್ಷೇತ್ರದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ನ.14ರಂದು ಶಾಲಾ ಶಿಕ್ಷಕರು, ಪೋಷಕರ ಮಹಾಸಭೆ ಕರೆಯಲು ಮನೆ ಮನೆಗೆ ಭೇಟಿಕನ್ನಡಪ್ರಭ ವಾರ್ತೆ ಪಾಂಡವಪುರ
ರಾಜ್ಯ ಸರ್ಕಾರದ ಮಹತ್ವದ ಆದೇಶದ ಹಿನ್ನೆಲೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ 1ರಿಂದ 12ನೇ ತರಗತಿವರೆಗಿನ ಶಾಲಾ ಶಿಕ್ಷಕರು-ಪೋಷಕರ ಮಹಾಸಭೆ ಕರೆಯುವಂತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಎನ್.ಮಹಾದೇವಪ್ಪ ಎಸ್ ಡಿಎಂಸಿ ಜತೆಗೂಡಿ ಮನೆ ಮನೆ ಭೇಟಿ ನೀಡಿ ಪೋಷಕರ ಮನವೊಲಿಸಿದರು.ಮಹಾಸಭೆಯಲ್ಲಿ ಪೋಷಕರು ಹಾಗೂ ಶಿಕ್ಷಕರೊಂದಿಗೆ ಸಂವಾದ ಏರ್ಪಡಿಸಿರುವುದರಿಂದ ಪ್ರತಿಯೊಬ್ಬ ಮಕ್ಕಳ ಪೋಷಕರು ತಪ್ಪದೇ ಮಹಾಸಭೆಗೆ ಆಗಮಿಸಬೇಕು ಎಂದು ಮನವಿ ಮಾಡಲಾಯಿತು.
ಹಲವು ತಿಂಗಳುಗಳಿಂದ ಶಾಲೆಗೆ ಹಾಜರಾಗದೆ ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಮನೆ ಮನೆಗೂ ಭೇಟಿ ನೀಡಿ ಪೋಷಕರಿಗೆ ಅರಿವು ಮೂಡಿಸಲಾಯಿತು. ದೀರ್ಘ ಕಾಲ ಮಕ್ಕಳು ಶಾಲೆಯಿಂದ ಹೊರಗುಳಿಯಲು ಕಾರಣವೇನು, ಏಕಾಏಕಿ ಶಾಲೆಗೆ ಬರುವುದನ್ನು ಮಕ್ಕಳು ನಿಲ್ಲಿಸಲು ಕಾರಣವೇನು ಎಂಬುದರ ಬಗ್ಗೆ ಪೋಷಕರ ಜತೆಗೆ ಚರ್ಚೆ ನಡೆಸಿ, ನಾಳೆಯಿಂದಲೇ ಶಾಲೆಗೆ ಮಕ್ಕಳನ್ನು ಬರುವಂತೆ ಮನವೊಲಿಸಬೇಕು ಎಂದು ಪೋಷಕರಲ್ಲಿ ವಿನಂತಿ ಮಾಡಿದರು.ಈ ವೇಳೆ ಎಸ್ ಡಿಎಂಸಿ ಅಧ್ಯಕ್ಷ ಹಾರೋಹಳ್ಳಿ ಮಾಕೇಗೌಡ ಹಾಗೂ ಎಸ್ ಡಿಎಂಸಿ ಸದಸ್ಯರೂ, ಪತ್ರಕರ್ತರಾದ ಎನ್.ಕೃಷ್ಣೇಗೌಡರು, ಪೋಷಕರ ಜತೆ ಮಾತನಾಡಿ, ಶಾಲೆಗೆ ಗೈರಾಗದೆ ತಪ್ಪದೇ ಹಾಜರಾಗುವಂತೆ ತಮ್ಮ ಮಕ್ಕಳಿಗೆ ತಿಳಿವಳಿಕೆ ಹಾಗೂ ಬುದ್ಧಿ ಹೇಳುವಂತೆ ಪೋಷಕರಿಗೆ ತಿಳಿ ಹೇಳಿ ಶಾಲೆಗೆ ಮಕ್ಕಳನ್ನು ಕಳಿಸುವಂತೆ ಮನವಿ ಮಾಡಿದರು.
;Resize=(128,128))
;Resize=(128,128))
;Resize=(128,128))
;Resize=(128,128))