ಸಾರಾಂಶ
ಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಕುಂಚಿಟಿಗ ಒಕ್ಕಲಿಗ ಸಮಾಜದ ಮುಖಂಡ ಎಚ್.ನಿಂಗಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರು ಈ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಕುಂಚಿಟಿಗ ಒಕ್ಕಲಿಗ ಸಮಾಜದ ಮುಖಂಡ ಎಚ್.ನಿಂಗಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರು ಈ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.ನಗರದ ಆದರ್ಶ ನಗರದ ಎಚ್.ನಿಂಗಯ್ಯ ಅವರ ಮನೆಗೆ ಭೇಟಿ ನೀಡಿ ಬೆಂಬಲ ಕೋರಿದರು. ಈ ವೇಳೆ ಮಾತನಾಡಿದ ಎಚ್.ನಿಂಗಯ್ಯ, ಸೋಮಣ್ಣ ಅವರು ವಸತಿ ಸಚಿವರಾಗಿದ್ದಾಗ ಬಡವರಿಗೆ ಹೆಚ್ಚಿನ ಪ್ರಮಾಣದಲ್ಲಿ ಮನೆಗಳನ್ನು ನೀಡಿ ನೆರವಾಗಿದ್ದಾರೆ. ಆಸರೆ ನೀಡುವಂತಹ ಪುಣ್ಯದ ಕೆಲಸ ಮಾಡಿದ್ದೀರಿ, ಈ ಚುನಾವಣೆಯಲ್ಲಿ ಜನ ನಿಮ್ಮ ಕೈ ಹಿಡಿದು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮುಖಂಡರಾದ ದೊಡ್ಡಮನೆ ಗೋಪಾಲಗೌಡ, ಡಾ.ಪರಮೇಶ್, ದೊಡ್ಡಲಿಂಗಪ್ಪ, ತುಂಬಾಡಿ ದೇವರಾಜು, ಚೆನ್ನಿಗಪ್ಪ ಮೊದಲಾದವರು ಹಾಜರಿದ್ದರು.