ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್‌ಗೆ ವಿ.ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳ ಬಳಗದ ಸಂಪೂರ್ಣ ಬೆಂಬಲ ಇದೆ ಎಂದು ಮುಖಂಡ ಅಯ್ಯನಪುರ ಶಿವಕುಮಾರ್ ಹೇಳಿದರು.ನಗರದ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಲವರು ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿಯಲ್ಲೇ ಇದ್ದಾರೆ. ಅವರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಅವರು ನಿವೃತ್ತಿ ಹೊಂದಿದ ಮೇಲೆ ಯಾವ ಪಕ್ಷದ ಸಭೆ, ಸಮಾರಂಭಕ್ಕೆ ಹೋಗುವುದಿಲ್ಲ ಎಂದಿದ್ದರು. ಅಭಿಮಾನಿಗಳಿಗೆ ನಿಮ್ಮದೇ ಆದ ತೀರ್ಮಾನ ತೆಗೆದುಕೊಳ್ಳಿ ಎನ್ನುವುದರ ಜೊತೆಗೆ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಆದ್ದರಿಂದ ನಾವೆಲ್ಲಾ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಿದ್ದೇವೆ ವಿ.ಶ್ರೀನಿವಾಸಪ್ರಸಾದ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು.ಬಿಜೆಪಿ ವಿ.ಶ್ರೀನಿವಾಸಪ್ರಸಾದ್‌ರನ್ನು ಗೌರವಯುತವಾಗಿ ನಡೆಸಿಕೊಂಡಿಲ್ಲ. ಕಳೆದ ವಿಧಾನಸಭೆ ಚುನಾವಣೆ ಮತ್ತು ಈ ಬಾರಿ ಲೋಕಸಭಾ ಚುನಾವಣೆ ಸಂಬಂಧ ಟಿಕೆಟ್ ಹಂಚಿಕೆಯ ನಡೆದ ಸಭೆಗಳಿಗೂ ಪರಿಗಣಿಸಲಿಲ್ಲ. ಅವರ ಅಳಿಯ ಡಾ.ಮೋಹನ್ ಅವರನ್ನು ಬಿಜೆಪಿ ಕಡೆಗಣಿಸಿದೆ. ಒತ್ತಡಕ್ಕೆ ಬಂದು ಹೋಗಿದ್ದಾರೆ ಎಂದರು. ಬಿಜೆಪಿ ಪರವಾಗಿ ಯಾರೂ ಇಲ್ಲ. ನಮ್ಮ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ಇದೆ. ಶ್ರೀನಿವಾಸಪ್ರಸಾದ್ ಆಸೆ ಕೂಡ ಇದೆ ಆಗಿದೆ. ಅವರ ಹಿತೈಷಿಗಳು, ಬೆಂಬಲಿಗರು ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸಪ್ರಸಾದ್ ಸಹೋದರ ವಿ.ರಾಮಸ್ವಾಮಿ ಸುರೇಶ್, ಬಸವರಾಜು, ಸಂಪತ್ತು, ಪಸನ್ನ, ಶಿವರಾಜು ಹಾಜರಿದ್ದರು.