ಸಾರ್ವಜನಿಕರು ತಮ್ಮ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ನವಜಾತ ಶಿಶುವಿನಿಂದ ಹಿಡಿದು ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಇಂದೇ ತಪ್ಪದೆ ಪಲ್ಸ್ ಪೋಲಿಯೋ ಹನಿ ಹಾಕಿಸಿಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪೋಲಿಯೋ ಮುಕ್ತ ವಿಶ್ವ ನಿರ್ಮಾಣಕ್ಕಾಗಿ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಶಾಸಕ ರಮೇಶ್‌ ಬಂಡಿ ಸಿದ್ದೇಗೌಡ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಅಂಗವಾಗಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು ತಮ್ಮ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ನವಜಾತ ಶಿಶುವಿನಿಂದ ಹಿಡಿದು ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಇಂದೇ ತಪ್ಪದೆ ಪಲ್ಸ್ ಪೋಲಿಯೋ ಹನಿ ಹಾಕಿಸಿಬೇಕು ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ ಆಶಾಲತಾ ಮಾತನಾಡಿ, ತಾಲೂಕಿನಾದ್ಯಂತ 11,676 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ 69 ಲಸಿಕಾ ಕೇಂದ್ರ ತೆರೆಯಲಾಗಿದೆ. 276 ಲಸಿಕೆದಾರರನ್ನು ಹಾಗೂ 14 ಜನ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.

ಪ್ರಮುಖ ಪ್ರವಾಸಿ ತಾಣಗಳಲ್ಲಿಯೂ ಕೂಡ ಪೋಲಿಯೋ ಬೂತ್ ತೆರೆಯಲಾಗಿದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಹಾಕಿಸಿ ಲಸಿಕಾ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಎಂದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷ ಎಂ.ಎಲ್ ದಿನೇಶ್, ಮಾಜಿ ಸದಸ್ಯ ಕೃಷ್ಣಪ್ಪ, ತಾಪಂ ಇಒ ವೇಣು, ಸಿಡಿಪಿಒ ಸಕಲೇಶ್ವರ, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರವಿಕುಮಾರ್ ಎಸ್, ದೇವರಾಜು, ಅನಿಲ್ ಕುಮಾರ್ ಜಿ ಎಸ್, ಇಮ್ರಾನ್ ಆರ್, ರಾಧಾ ಪಿ ಆರ್, ಮುಖಂಡರಾದ ಲೋಕೇಶ್, ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ ವಿಜಯಲಕ್ಷ್ಮಿ, ಮಕ್ಕಳ ತಜ್ಞ ಡಾ.ಶ್ರೀಧರ್, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ. ಸವಿತಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ್ ಹಲವರು ಇದ್ದರು.