ಕಾಲುಬಾಯಿ ರೋಗದಿಂದ ಮುಕ್ತವಾಗಲು ಲಸಿಕೆ ಹಾಕಿಸಿ

| Published : Nov 07 2025, 02:45 AM IST

ಸಾರಾಂಶ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೮ನೇ ಸುತ್ತಿನ ಲಸಿಕಾ ಕಾರ್ಯಕ್ರಮ ನ. ೩ರಿಂದ ಆರಂಭವಾಗಿದ್ದು, ಡಿ. ೨ರ ವರೆಗೆ ನಡೆಯಲಿದೆ.

ಯಲಬುರ್ಗಾ: ಕಾಲುಬಾಯಿ ರೋಗದಿಂದ ಮುಕ್ತವಾಗಿಸಲು ಪ್ರತಿಯೊಬ್ಬ ರೈತರು ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ ಹೇಳಿದರು.

ತಾಲೂಕಿನ ಗುನ್ನಾಳ, ಯಾಪಲದಿನ್ನಿ, ಕಲಭಾವಿ ಹಾಗೂ ಮಾಟಲದಿನ್ನಿ ಗ್ರಾಮದಲ್ಲಿ ಪಶು ಪಾಲನಾ ಇಲಾಖೆಯಿಂದ ನಡೆಯುತ್ತಿರುವ ೮ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಪರಿಶೀಲನೆ ನಡೆಸಿ ಮಾತಮಾಡಿದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೮ನೇ ಸುತ್ತಿನ ಲಸಿಕಾ ಕಾರ್ಯಕ್ರಮ ನ. ೩ರಿಂದ ಆರಂಭವಾಗಿದ್ದು, ಡಿ. ೨ರ ವರೆಗೆ ನಡೆಯಲಿದೆ.

ಈ ಕಾರ್ಯಕ್ರಮದಡಿ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಸಹಕರಿಸಬೇಕು ಎಂದರು.

ಈ ಸಂದರ್ಭ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಚೂರಿ,ಸಿಬ್ಬಂದಿ, ಬಿ.ಎಂ. ಗೋಡಿ, ಸಿದ್ದು ಚವ್ಹಾಣ ಸೇರಿದಂತೆ ಮತ್ತಿತರರು ಇದ್ದರು.