ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲಾ ಔಷಧಿ ನಿಯಂತ್ರಕರಿಗೆ ಔಷಧಿ ಮಳಿಗೆಗಳಿಗೆ ಭೇಟಿ ನೀಡಿ ಡ್ರಗ್ಸ್ ಮಾರಾಟ ಬಗ್ಗೆ ವರದಿ ಮಾಡುವಂತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸಿ ಯೋಜನೆಗಳನ್ನು ನೀಡಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಕಾರ್ಯಕ್ರಮ ಹಾಗೂ ತೀವ್ರತರ ಅತಿಸಾರ ಭೇದಿ ತಡೆಗಟ್ಟುವ ಅಭಿಯಾನ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಕಾರ್ಯಪಡೆ ಸಮಿತಿಯ ಸಭೆಯಲ್ಲಿ ಮಾತನಾಡಿದರು.ಮಹಿಳೆಯರಿಗೆ ವಿವಿಧ ಸೇವೆ
ಏಡ್ಸ್ ಕಾರ್ಯಕ್ರಮದಡಿ ಸರ್ಕಾರದ ವಿವಿಧ ಯೋಜನೆಗಳಾದ ಎಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಧನಶ್ರೀ ಯೋಜನೆ, ಹೆಚ್.ಐ.ವಿ. ಸೋಂಕಿತ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯ, ಎಚ್.ಐ.ವಿ. ಸೋಂಕಿತ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆ, ಪುನರ ವಸತಿ ಯೋಜನೆ ಹಾಗೂ ಮೈತ್ರಿಯೋಜನೆ, ಲಿಂಗತ್ವ ಅಲ್ಪಸಂಖ್ಯಾತರಿಗೆ, ಚೇತನಯೋಜನೆ ಲೈಂಗಿಕ ಕಾರ್ಯಕರ್ತೆಯರಿಗಾಗಿ ಸೇವೆಗಳನ್ನು ನೀಡಲಾಗುತ್ತಿದೆ.ವಿಶೇಷ ಲಸಿಕಾ ಅಭಿಯಾನದಡಾರ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಾಗೂ ಕಾರ್ಯಚಟುವಟಿಕೆ ಹಮ್ಮಿಕೊಳ್ಳಲು ಸಹಕರಿಸುವುದು ಮತ್ತು ಎಲ್ಲಾ ೫ ವರ್ಷದೊಳಗಿನ ಮಕ್ಕಳಿಗೆ ವಿಟಮಿನ್-ಎ ನೀಡಲು ಸಹಕರಿಸುವುದು ಹಾಗೂ ಎಲ್ಲಾ ಮಕ್ಕಳು ದಢಾರ ರುಬೆಲ್ಲ ಲಸಿಕೆ ಜೊತೆ ವಿಟಮಿನ್-ಎ ಪಡೆದಿರುವ ಕುರಿತು ಖಾತರಿಪಡಿಸಿಕೊಳ್ಳಬೇಕೆಂದು ಹೇಳಿದರು.
ಬಂಗಾರಪೇಟೆ-೬೯೬, ಕೋಲಾರ ೫೬೪, ಮಲೂರು-೪೨೯, ಮುಳಬಾಗಿಲು-೫೫೮, ಶ್ರೀನಿವಾಸಪುರ-೪೩೪ ಸಂಖ್ಯೆಯಲ್ಲಿ ಓ.ಆರ್.ಎಸ್./ ಜಿಂಕ್ ಕಾರ್ನರ್‌ಗಳನ್ನು ಸ್ಥಾಪಿಸಲಾಗಿದೆ. ೦-೫ ವರ್ಷದೊಳಗಿನ ಮಕ್ಕಳು ಅತೀಸಾರ ಭೇದಿಯಿಂದ ಮರಣವಾಗದಂತೆ ತಡೆಗಟ್ಟಲು ಸಂಬಂಧಿಸಿದ ಇಲಾಖೆಗಳು ಸಹಕಾರ ನೀಡುವಂತೆ ಸೂಚಿಸಿದರು.ಸಭೆಯಲ್ಲಿ ಡಿಎಓ ಡಾ.ಶ್ರೀನಿವಾಸ್, ಜಿಲ್ಲಾ ಆಸ್ಪತ್ರೆ ಅಧಿಕಾರಿ ಜಗದೀಶ್ ಇದ್ದರು.
)
)
;Resize=(128,128))
;Resize=(128,128))
;Resize=(128,128))
;Resize=(128,128))