ಪೋಲಿಯೋ ಮುಕ್ತ ಭಾರತ ಆಗಬೇಕು. ಮಕ್ಕಳ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು
ಕೊಪ್ಪಳ: ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವುದರಿಂದ ಅಂಗವಿಕಲತೆ ದೂರವಾಗುತ್ತದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ನಗರದ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ಡಿ. 21 ರಿಂದ 24 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು. ಸಾರ್ವಜನಿಕರು ತಮ್ಮ ಹತ್ತಿರದ ಲಸಿಕಾ ಕೇಂದ್ರಕ್ಕೆ ತೆರಳಿ 5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಹಾಕಿಸುವ ಮೂಲಕ ಮಗುವಿಗೆ ಶಾಶ್ವತ ಅಂಗವಿಕಲತೆ ತರಬಲ್ಲ ಪೋಲಿಯೋ ಲಸಿಕೆ ಮೂಲಕ ಪ್ರತಿರೋಧಿಸೋಣ. ಪೋಲಿಯೋ ಮುಕ್ತ ಭಾರತ ಆಗಬೇಕು. ಮಕ್ಕಳ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಮಕ್ಕಳು ದೈಹಿಕ, ಮಾನಸಿಕ,ಸದೃಢರಾಗಿ ಬೆಳೆಯಬೇಕು. ಅಂದಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಸದೃಢತೆ ಇರಬೇಕಾದರೆ ಆರೋಗ್ಯ ಮುಖ್ಯ. ಉತ್ತಮ ಆರೋಗ್ಯದ ಕಡೆ ಗಮನ ಹರಿಸಬೇಕು ಎಂದರು.ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ,ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ. ಲಿಂಗರಾಜು, ಆರ್.ಸಿ.ಎಚ್ ಅಧಿಕಾರಿ, ರೋಟರಿ ಕ್ಲಬ್ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳಿದ್ದರು.