ಮಾರ್ಟಳ್ಳಿ ಕಡೆಯಿಂದ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರು ಬಂದ ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಗೂಡ್ಸ್ ವಾಹನದೊಂದಿಗೆ ಡಿಕ್ಕಿ ಸಂಭವಿಸಿದೆ.

ಹನೂರು:

ತಾಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದ ಬಳಿ ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬರಿಗೆ ಕಾಲು ಮುರಿತವಾಗಿದೆ.

ವಡ್ಡರದೊಡ್ಡಿ ಗ್ರಾಮದ ನಿವಾಸಿ ಅಂಥೋಣಿ (35) ಗಾಯಗೊಂಡವರು. ಅವರು ಮಾರ್ಟಳ್ಳಿ ಕಡೆಯಿಂದ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರು ಬಂದ ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಗೂಡ್ಸ್ ವಾಹನದೊಂದಿಗೆ ಡಿಕ್ಕಿ ಸಂಭವಿಸಿದೆ. ಅಪಘಾತದ ಪರಿಣಾಮವಾಗಿ ಅಂಥೋಣಿಗೆ ಕಾಲು ಮುರಿತವಾಗಿದೆ.ಸ್ಥಳೀಯರು ಗಾಯಾಳುವನ್ನು ತಕ್ಷಣ ಸುಳ್ವಾಡಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗೆ ಕೊಳ್ಳೇಗಾಲದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ರಾಮಾಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.------------

25ಸಿಎಚ್ಎನ್‌13