ಕನ್ನಡ ಚಲನಚಿತ್ರ ‘ವಾದಿರಾಜ ವಾಲಗ ಮಂಡಳಿ’ ಮೇ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಬ್ರಹ್ಮಾವರ: ಎಂ.ಎನ್.ಆರ್. ಪ್ರೊಡಕ್ಷನ್ ಸಂಸ್ಥೆಯು ನಿರ್ಮಿಸುತ್ತಿರುವ ಹಾಸ್ಯಮಯ ಕನ್ನಡ ಚಲನಚಿತ್ರ ‘ವಾದಿರಾಜ ವಾಲಗ ಮಂಡಳಿ’ ಮೇ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

‘ವಾದಿರಾಜ ವಾಲಗ ಮಂಡಳಿ’ ಸಿನಿಮಾ ಚಿತ್ರೀಕರಣ ನಡೆಯುತ್ತಿರುವ ಇಲ್ಲಿನ ಹಂದಾಡಿ ಗುತ್ತಿನ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಇದು ತಮ್ಮ ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ 3ನೇ ಸಿನಿಮಾವಾಗಿದ್ದು, ಶಶಿರಾಜ್ ರಾವ್‌ ಕಾವೂರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ನಿರ್ದೇಶಿಸುತಿದ್ದಾರೆ ಎಂದರು.

‘ವಾದಿರಾಜ ವಾಲಗ ಮಂಡಳಿ’ ಸಂಪೂರ್ಣ ಹಾಸ್ಯಮಯ ಚಿತ್ರವಾಗಿದ್ದರೂ, ಉತ್ತಮ ಕಥಾ ಹಂದರವಿರುವ, ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲಿದೆ. ತು‍ಳು ನಾಟಕ ಮತ್ತು ಸಿನಿಮಾ ರಂಗದ ಖ್ಯಾತ ಕಲಾವಿದರಾದ ನವೀನ್ ಡಿ. ಪಡೀಲ್, ಮೈಮ್ ರಾಮದಾಸ್, ಲಕ್ಷ್ಮಣ ಕುಮಾರ್ ಮಲ್ಲೂರು, ಪ್ರಕಾಶ ತೂಮಿನಾಡು, ದೀಪಕ್‌ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳೂರ್, ಶೋಭರಾಜ್ ಪಾವೂರು, ತನ್ವಿ ರಾವ್, ವೇನ್ಯಾ ರೈ, ಚೈತ್ರಾ ಶೆಟ್ಟಿ, ಕೀರ್ತನಾ ಮುಂತಾದವರು ಮುಖ್ಯ ಭೂಮಿಕೆಯಲ್ಲಿದ್ದಾರೆ ಎಂದರು.ಈ ಸಂದರ್ಭ ನಿರ್ಮಾಪಕರಾದ ಮೇಘರಾಜ್ ಆರ್.ಜೈನ್, ನಿರ್ದೇಶಕ ಶಶಿರಾಜ್ ರಾವ್ ಕಾವೂರು, ಛಾಯಾಗ್ರಾಹಕ ಎಸ್.ಚಂದ್ರಶೇಖರನ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಸಹನಿರ್ಮಾಪಕರಾದ ಜಯಪ್ರಕಾಶ್ ತುಂಬೆ, ವಿನಯ್ ಕುಮಾರ್ ಸೂರಿಂಜೆ , ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಮಹೇಶ್ ಹೆಗ್ಡೆ ಎಂ., ರವೀಂದ್ರ ಕಂಬಳಿ‌, ಕಾರ್ಯಕಾರಿ ನಿರ್ಮಾಪಕ ಸಂತೋಷ್ ಶೆಟ್ಟಿ, ನಟರಾದ ಗೋಪಿನಾಥ್ ಭಟ್, ಸುನಿಲ್ ಕುಮಾರ್ ಬಜಗೋಳಿ ಮೊದಲಾದವರು ಉಪಸ್ಥಿತರಿದ್ದರು.