ಸಾರಾಂಶ
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ವತಿಯಿಂದ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು ಪಾಲಿಸಿದರೆ ಮಾತ್ರ ವ್ಯಕ್ತಿಯ ಹಾಗೂ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ನಿರ್ದೇಶಕಿ ಪ್ರೊ. (ಡಾ.) ನಿರ್ಮಲಾ ಕುಮಾರಿ ಕೆ. ತಿಳಿಸಿದರು.ಅವರು ಶುಕ್ರವಾರ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕ ಆಯೋಜಿಸಿದ್ದ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.ಕಾಲೇಜಿನ ಮಾನವಿಕ ವಿಭಾಗದ ಮುಖ್ಯಸ್ಥ ಪ್ರೊ.ರೋಹಿತ್ ಎಸ್. ಅಮೀನ್ ಮಾತನಾಡಿ ದೇಶದ ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಹಾಗೂ ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಪಾತ್ರ ಅಪಾರವಾಗಿದ್ದು, ಅವರು ತಮ್ಮ ಆರೋಗ್ಯವನ್ನು ಲೆಕ್ಕಿಸದೇ, ನಾವು ಸಾಮರಸ್ಯದಿಂದ ಬಾಳಲು ಪ್ರಪಂಚದಲ್ಲಿ ಅತ್ಯಂತ ಉತ್ತಮವಾದ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. (ಡಾ.) ರಘುನಾಥ್ ಕೆ.ಎಸ್. ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಸುರೇಖಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಸಿ.ಬಿ. ನವೀನ್‌ಚಂದ್ರ ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಎಲ್ಲ ಬೋಧಕ ಹಾಗೂ ಬೋಧಕೇತರರು ಹಾಜರಿದ್ದರು. ಸುಮಂತ್ ಎಂ. ಕರೀಯನ್ವರ್ ಸ್ವಾಗತಿಸಿದರು. ಶ್ರೀನಿಧಿ ಪ್ರಾರ್ಥಿಸಿದರು. ದಿಶಾ ವಂದಿಸಿದರು. ಚಂದ್ರಿಕಾ ಕಾರ್ಯಕ್ರಮವನ್ನು ನಿರೂಪಿಸಿದರು. ಎನ್‌ಎಸ್‌ಎಸ್ ವಿದ್ಯಾರ್ಥಿ ಕಾರ್ಯದರ್ಶಿಗಳಾದ ಅಶೋಕ ಮತ್ತು ನಂದನ್ ರೈಮಂಡ್ ಮಚಾಡೊ ಹಾಜರಿದ್ದರು.;Resize=(128,128))
;Resize=(128,128))
;Resize=(128,128))