ದೊಡ್ಡಬಳ್ಳಾಪುರದೆಲ್ಲೆಡೆ ವೈಕುಂಠ ಏಕಾದಶಿ

| Published : Dec 24 2023, 01:45 AM IST

ಸಾರಾಂಶ

ದೊಡ್ಡಬಳ್ಳಾಪುರ: ವೈಕುಂಠ ಏಕಾದಶಿ ಅಂಗವಾಗಿ ಶನಿವಾರ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ದಿನವಿಡೀ ಸಾವಿರಾರು ಭಕ್ತಾದಿಗಳು ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು.

ದೊಡ್ಡಬಳ್ಳಾಪುರ: ವೈಕುಂಠ ಏಕಾದಶಿ ಅಂಗವಾಗಿ ಶನಿವಾರ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ದಿನವಿಡೀ ಸಾವಿರಾರು ಭಕ್ತಾದಿಗಳು ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು.

ನಗರದ ಮತ್ತು ತಾಲೂಕಿನ ಪ್ರಮುಖ ದೇವಾಲಯಗಳಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ಸಹಸ್ರಾರು ಭಕ್ತಾದಿಗಳು ಸಾಲುಗಟ್ಟಿ ನಿಂತು ವೈಕುಂಠ ದ್ವಾರದ ಮೂಲಕ ವಿಶೇಷ ದರ್ಶನ ಪಡೆದರು.

ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ, ವಜ್ರ ಕವಚಧಾರಣೆ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವೈಕುಂಠ ಏಕಾದಶಿ ಅಂಗವಾಗಿ ದೇವಾಲಯದಲ್ಲಿ ಸಂಭ್ರಮ ಮನೆ ಮಾಡಿತ್ತು.

ದೇವಾಲಯದಲ್ಲಿರುವ ಶ್ರೀಸ್ವಾಮಿಗೆ ವಿಶೇಷ ವಜ್ರಾಂಗಿ ಅಲಂಕಾರ ಮಾಡಲಾಗಿತ್ತು. ವಜ್ರಖಚಿತ ಆಭರಣಗಳಿಂದ ಶ್ರೀಸ್ವಾಮಿಯನ್ನು ಅಲಂಕರಿಸಿದ್ದ ದೃಶ್ಯ ಭಕ್ತಾದಿಗಳ ಆಕರ್ಷಣೆಗೆ ಪಾತ್ರವಾಯಿತು. ದೇವಾಲಯದ ಮೂಲದೇವರಾಗಿರುವ ಲಕ್ಷ್ಮೀಪದ್ಮಾವತಿ ಸಹಿತ ಶ್ರೀವೆಂಕಟೇಶ್ವರ ಸ್ವಾಮಿಗೆ ಕೂಡ ವಿಶೇಷ ಪೂಜಾಲಂಕಾರಗಳು ನಡೆದವು. ಬೆಳಗಿನ ಜಾವ 3 ಗಂಟೆಯಿಂದಲೇ ದೇವರ ದರ್ಶನಕ್ಕೆ ಭಕ್ತರು ಆಗಮಿಸಿದ್ದರು.

ತಾಲೂಕಿನ ತೂಬಗೆರೆಯಲ್ಲಿರುವ ವೆಂಕಟರಮಣಸ್ವಾಮಿ ದೇವಾಲಯ, ಕಾಡನೂರು ಗ್ರಾಮದ ಚನ್ನಕೇಶವ ದೇವಾಲಯ, ಕಿಲ್ಲೆ ವೇಣುಗೋಪಾಲ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವೆಂಕಟರಮಣಸ್ವಾಮಿಗೆ ವಜ್ರಾಂಗಿ ಅಲಂಕಾರ ಮಾಡಲಾಗಿತ್ತು. ವಡ್ಡರಹಳ್ಳಿ ತಿರುಮಲ ದೇವರ ದೇವಾಲಯ, ನಗರದ ವೆಂಕಟರಮಣ ಸ್ವಾಮಿ, ರಂಗನಾಥಸ್ವಾಮಿ, ವೇಣುಗೋಪಾಲ ಸ್ವಾಮಿ, ನರಸಿಂಹಸ್ವಾಮಿ, ವೈಕುಂಠ ಜನಾರ್ಧನಸ್ವಾಮಿ ದೇವಾಲಯಗಳಲ್ಲಿ, ರಂಗಪ್ಪ ವೃತ್ತದಲ್ಲಿರುವ ಶಿರಡಿಸಾಯಿಬಾಬಾ ಮಂದಿರ, ನೆಲದಾಂಜನೇಯಸ್ವಾಮಿ ದೇವಾಲಯ, ಅರಳುಮಲ್ಲಿಗೆ ಬಾಗಿಲು ಆಂಜನೇಯ ದೇವಾಲಯ ಸೇರಿದಂತೆ ಹಲವೆಡೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

(ಅಗತ್ಯಕ್ಕೆ ತಕ್ಕಂತೆ ಸಣ್ಣದಾಗಿ ಒಂದೋ ಎರಡೋ ಮಾತ್ರ ಫೋಟೋ ಬಳಸಿ)

23ಕೆಡಿಬಿಪಿ3-

ದೊಡ್ಡಬಳ್ಳಾಪುರದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಆಕರ್ಷಕ ವಜ್ರಾಂಗಿ ಅಲಂಕಾರ.

-23ಕೆಡಿಬಿಪಿ4-

ದೊಡ್ಡಬಳ್ಳಾಪುರದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವ ಜನರು.

23ಕೆಡಿಬಿಪಿ5- ದೊಡ್ಡಬಳ್ಳಾಪುರದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಸಂಭ್ರಮ.23ಕೆಡಿಬಿಪಿ6- ದೊಡ್ಡಬಳ್ಳಾಪುರದ ಕಿಲ್ಲೆ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಜ್ರಾಂಗಿ ಅಲಂಕಾರ.

23ಕೆಡಿಬಿಪಿ7- ದೊಡ್ಡಬಳ್ಳಾಪುರದ ತೂಬಗೆರೆ ಇತಿಹಾಸ ಪ್ರಸಿದ್ದ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷಾಲಂಕಾರ.

23ಕೆಡಿಬಿಪಿ8- ದೊಡ್ಡಬಳ್ಳಾಪುರದ ಸಾಸಲು ಗ್ರಾಮದಲ್ಲಿ ವೈಕುಂಠ ಏಕಾದಶಿ ಪೂಜಾ ಉತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಪಾಲ್ಗೊಂಡರು.