ಕಕ್ಕುಂದಕಾಡು ಶ್ರೀವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

| Published : Jan 11 2025, 12:47 AM IST

ಕಕ್ಕುಂದಕಾಡು ಶ್ರೀವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
Share this Article
  • FB
  • TW
  • Linkdin
  • Email

ಸಾರಾಂಶ

ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಈ ವರ್ಷವೂ ವೈಕುಂಠ ಏಕಾದಶಿ ಆಚರಣೆ ಶುಕ್ರವಾರ ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡಿತು. ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವೆಂಕಟೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಈ ವರ್ಷವೂ ವೈಕುಂಠ ಏಕಾದಶಿ ಆಚರಣೆ ಶುಕ್ರವಾರ ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡಿತು.

ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವೆಂಕಟೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು.

ಮಧ್ಯಾಹ್ನ ಶ್ರೀ ವೆಂಕಟೇಶ್ವರನಿಗೆ ವಿಶೇಷ ಮಹಾ ಪೂಜೆ ನೆರವೇರಿತು. ಮಹಾ ಮಂಗಳಾರತಿಯ ತಿರ್ಥ ಪ್ರಸಾದ ವಿತರಣೆಯ ಬಳಿಕ ಭಕ್ತಾದಿಗಳಿಗೆ ಉಪಹಾರ ವಿತರಿಸಲಾಯಿತು .

ಮುಖ್ಯ ಅರ್ಚಕ ಸುಧೀರ ಪೂಜಾ ಕೈಂಕರ್ಯ ನೆರವೇರಿಸಿದರು.

ವೈಕುಂಠ ಏಕಾದಶಿ, ದಿವ್ಯ ಸತ್ಸಂಗ:

ಸೋಮವಾರಪೇಟೆ: ಇಲ್ಲಿನ ಕುರುಹಿನಶೆಟ್ಟಿ ಸಮಾಜದ ಶ್ರೀ ರಾಮ ಮಂದಿರದಲ್ಲಿ ಶುಕ್ರವಾರ ೮ನೇ ವರ್ಷದ ವೈಕುಂಠ ಏಕಾದಶಿ ಮತ್ತು ದಿವ್ಯ ಸತ್ಸಂಗ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಪ್ರಯುಕ್ತ ದೇವಾಲಯವನ್ನು ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆ ಮತ್ತು ಸಂಜೆ ವಿಶೇಷ ಪೂಜೆಗಳು ನಡೆದವು. ಸಂಜೆ ೫ ಗಂಟೆಗೆ ಸೀತಾ ಬಳಗದಿಂದ ವಿಷ್ಣು ಸಹಸ್ರನಾಮ ಪಠಣ, ಸಂಜೆ 6ರಿಂದ ಆರ್ಟ್ ಆಫ್ ಲಿವಿಂಗ್‌ನ ಸ್ವಾಮಿ ಸೂರ್ಯಪಾದಜೀ (ಛಾಯಣ್ಣ) ಅವರಿಂದ ಗಾನ, ಜ್ಞಾನ, ಧ್ಯಾನಗಳನ್ನು ಒಳಗೊಂಡ ದಿವ್ಯ ಸತ್ಸಂಗ ಕಾರ್ಯಕ್ರಮ ನಡೆಯಿತು.ಅರ್ಚಕ ಮೋಹನ್ ಶಾಸ್ತ್ರಿ ಪೂಜೆ ನೆರವೇರಿಸಿದರು.