ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿತ್ತು. ಸಾವಿರಾರು ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ `ಸ್ವರ್ಗದ ಬಾಗಿಲು ಮೂಲಕ ಒಳನುಗ್ಗಿ ಶ್ರೀಲಕ್ಷ್ಮೀ ವೆಂಕಟರಮಣನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು. ಕಾರ್ಯಕ್ರಮದಲ್ಲಿ ಸಂಸದರು, ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಅವರು ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸೇರಿದಂತೆ ಅನೇಕ ಗಣ್ಯರು ದೇವರ ದರ್ಶನ ಪಡೆದು ಪೂಜೆಯಲ್ಲಿ ಭಾಗವಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ವೈಕುಂಠ ಏಕಾದಶಿಯ ಪವಿತ್ರ ಸಂದರ್ಭದ ಅಂಗವಾಗಿ ನಗರದ ಮಹಾರಾಜ ಪಾರ್ಕ್ ಸಮೀಪದ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿತ್ತು.

ಹಬ್ಬದ ದೇವರಿಗೆ ವಿಶೇಷ ಪೂಜೆ ಪುರಸ್ಕಾರಗಳು ನೆರವೇರಿದ್ದು, ಸಾವಿರಾರು ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ `ಸ್ವರ್ಗದ ಬಾಗಿಲು ಮೂಲಕ ಒಳನುಗ್ಗಿ ಶ್ರೀಲಕ್ಷ್ಮೀ ವೆಂಕಟರಮಣನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು. ಕಾರ್ಯಕ್ರಮದಲ್ಲಿ ಸಂಸದರು, ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಅವರು ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸೇರಿದಂತೆ ಅನೇಕ ಗಣ್ಯರು ದೇವರ ದರ್ಶನ ಪಡೆದು ಪೂಜೆಯಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಎಚ್.ಪಿ. ಸ್ವರೂಪ್, ವೈಕುಂಠ ಏಕಾದಶಿಯ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಸರ್ವರಿಗೂ ಭಗವಂತನು ಒಳಿತನ್ನೇ ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು. ಇದೇ ವೇಳೆ ಸಮಸ್ತ ಜನತೆಗೆ ವೈಕುಂಠ ಏಕಾದಶಿಯ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಅಲ್ಲದೆ, ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ಲಿಫ್ಟ್ಗೆ ಚಾಲನೆ ನೀಡಿರುವುದಾಗಿ ಹೇಳಿದರು. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಹಾಸನ ಜಿಲ್ಲೆಯ ಸಮಸ್ತ ಜನತೆಗೆ ವೈಕುಂಠ ಏಕಾದಶಿಯ ಶುಭಾಶಯಗಳನ್ನು ಮೊದಲು ತಿಳಿಸಿದರು. ಮಂಗಳವಾರದಂದು ನಗರ ಸುತ್ತಾಟ (ಸಿಟಿ ರೌಂಡ್ಸ್) ವೇಳೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ವೈಕುಂಠ ಏಕಾದಶಿ ಅಂಗವಾಗಿ ಬೆಳಗ್ಗಿನಿಂದಲೇ ನೂರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ಶಿಸ್ತಿನಿಂದ ದೇವರ ದರ್ಶನ ಪಡೆಯುತ್ತಿರುವುದು ಮನಸಿಗೆ ಸಂತೋಷ ತಂದಿದೆ ಎಂದರು. ನಮ್ಮ ಸಂಪ್ರದಾಯ, ಸಂಸ್ಕöತಿ ಹಾಗೂ ಭಕ್ತಿಯ ಮಾರ್ಗವನ್ನು ಉಳಿಸಿಕೊಂಡು ಹೋಗುವ ಇಂತಹ ಆಚರಣೆಗಳು ಮುಂದಿನ ತಲೆಮಾರಿಗೆ ದಾರಿ ತೋರಿಸುತ್ತವೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸೀತಾರಾಮಾಂಜನೇಯ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಶ್ರೀಕಾಂತ್, ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ, ಖಜಾಂಚಿ ಅನಂತರಾಮು, ಗಿರೀಶ್, ನಿರ್ದೇಶಕರಾದ ಅಶ್ವತ್, ರಕ್ಷಿತ್, ವೆಂಕಟಸುಬ್ಬಯ್ಯ, ನಟರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.