ಸಾರಾಂಶ
ಚನ್ನಪಟ್ಟಣ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ದೇವಾಲಯಗಳಿಗೆ ದೇವರ ದರ್ಶನಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಶುಕ್ರವಾರ ಮುಂಜಾನೆಯಿಂದಲೇ ಭಕ್ತರು ತಾಲೂಕಿನ ವಿವಿಧ ದೇವಾಲಯಗಳಿಗೆ ತೆರಳಿ ವೈಕುಂಠ ದ್ವಾರ ಪ್ರವೇಶಿಸಿ ಭಗವಂತನ ಅನುಗ್ರಹ ಪಡೆದರು.
ಚನ್ನಪಟ್ಟಣ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ದೇವಾಲಯಗಳಿಗೆ ದೇವರ ದರ್ಶನಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಶುಕ್ರವಾರ ಮುಂಜಾನೆಯಿಂದಲೇ ಭಕ್ತರು ತಾಲೂಕಿನ ವಿವಿಧ ದೇವಾಲಯಗಳಿಗೆ ತೆರಳಿ ವೈಕುಂಠ ದ್ವಾರ ಪ್ರವೇಶಿಸಿ ಭಗವಂತನ ಅನುಗ್ರಹ ಪಡೆದರು.
ತಾಲೂಕಿನ ಕರಿಯಪ್ಪನದೊಡ್ಡಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ, ಬೇವೂರು ಬೆಟ್ಟದ ತಿಮ್ಮಪ್ಪಸ್ವಾಮಿ ದೇವಾಲಯ, ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ, ಮಳೂರು ರಾಮಾಪ್ರಮೇಯ ಸ್ವಾಮಿ ದೇವಾಲಯ, ಕೋಟೆಯಲ್ಲಿರುವ ವರದರಾಜ ಸ್ವಾಮಿ ದೇಗುಲ, ಮಂಡಿಪೇಟೆಯಲ್ಲಿನ ಲಕ್ಷ್ಮೀ ನರಸಿಂಹ ದೇವಸ್ಥಾನ, ಕರಿತಿಮ್ಮಪ್ಪಸ್ವಾಮಿ ದೇವಸ್ಥಾನ, ಅಕ್ಕೂರು ಹೊಸಹಳ್ಳಿಯ ವೆಂಕಟೇಶ್ವರ ದೇವಸ್ಥಾನ ಸೇರಿದಂತೆ ಹಲವು ದೇಗುಲಗಳಲ್ಲಿ ವೈಕುಂಠ ಏಕಾದಶಿ ವಿಜೃಂಭಣೆಯಿಂದ ನೆರವೇರಿತು.ಸರದಿಯಲ್ಲಿ ನಿಂತು ದರ್ಶನ:ತಾಲೂಕಿನ ಕರಿಯಪ್ಪನದೊಡ್ಡಿಯಲ್ಲಿ ನೆಲೆ ನಿಂತಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ಬೆಳಗಿನಿಂದ ಸಂಜೆವರೆಗೂ 20 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿದರು. ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದುಕೊಂಡರು. ಇದೇ ವೇಳೆ ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ಅಧಿಕಾರಿಗಳು ಹಾಗೂ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿದರು.ಪ್ರಸಾದ ವಿನಿಯೋಗ:ದೇವಸ್ಥಾನಗಳಿಗೆ ಆಗಮಿಸಿದ ಭಕ್ತರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು. ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ದೇಗುಲಗಳಲ್ಲೂ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಳವಡಿಸಿದ್ದ ವಿವಿಧ ರೀತಿಯ ಕಲಾ ಪ್ರಕಾರಗಳು, ಭಜನೆ ಹಾಗೂ ಭರತನಾಟ್ಯ ಕಾರ್ಯಕ್ರಮಗಳು ದರ್ಶನಕ್ಕೆ ಆಗಮಿಸಿದ್ದ ಭಕ್ತರ ಕಣ್ಮನ ಸೆಳೆಯಿತು. ಪೋಟೊ೧೦ಸಿಪಿಟಿ೩: ಕರಿಯಪ್ಪನದೊಡ್ಡಿ ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪೋಟೊ೧೦ಸಿಪಿಟಿ೪: ವೈಕುಂಠ ಏಕಾದಶಿ ಅಂಗವಾಗಿ ಅರಿಶಿಣದಲ್ಲಿ ಅಲಂಕರಿಸಿರುವ ಅಕ್ಕೂರು ಹೊಸಹಳ್ಳಿ ವೆಂಕಟೇಶ್ವರ ಸ್ವಾಮಿ.