ಸಾರಾಂಶ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ ಅಂಗವಾಗಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ಉದ್ಯಮಿ ವಾಮನ ಪೈ-ಅನುರಾಧ ಪೈ ದಂಪತಿಯನ್ನು ಮಂಗಳವಾರ ಪುತ್ತೂರು ಬಿಜೆಪಿಯ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷ ನಿರಂತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಪ್ರಯುಕ್ತ, ಈ ಹಿಂದೆ ವಾಜಪೇಯಿ ಅವರನ್ನು ಭೇಟಿಯಾಗಿ ಅವರೊಂದಿಗೆ ಭಾವಚಿತ್ರ ತೆಗೆಸಿಕೊಂಡಿದ್ದ, ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ಉದ್ಯಮಿ ವಾಮನ ಪೈ-ಅನುರಾಧ ಪೈ ದಂಪತಿಯನ್ನು ಮಂಗಳವಾರ ಪುತ್ತೂರು ಬಿಜೆಪಿಯ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ವಾಮನ ಪೈ ಪಕ್ಷದಲ್ಲಿ ನಿಜವಾದ ಕಾರ್ಯಕರ್ತ ಹೇಗಿರಬೇಕು ಎನ್ನುವುದನ್ನು ವಾಜಪೇಯಿ ತೋರಿಸಿಕೊಟ್ಟಿದ್ದರು ಎಂದು ನೆನಪಿಸಿದರು.
ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಕಾರ್ಯದರ್ಶಿ ನಾಗೇಶ್ ಪ್ರಭು, ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ, ಸಾಜ ರಾಧಾಕೃಷ್ಣ ಆಳ್ವ, ಮಾಜಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಜನ್ಮಶತಾಬ್ಧಿ ಕಾರ್ಯಕ್ರಮದ ಸಂಚಾಲಕ ಯುವರಾಜ ಪೆರಿಯತ್ತೋಡಿ, ಸಹ ಸಂಚಾಲಕಿ ವಸಂತ ಲಕ್ಷ್ಮೀ, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ನಗರ ಸಭಾ ಸದಸ್ಯ ಮನೋಹರ್ ಕಲ್ಲಾರೆ, ಶಶಿಕಲಾ ಸಿ.ಎಸ್., ದೀಕ್ಷಾ ಪೈ, ಡಾ.ಗೋಪಿನಾಥ ಪೈ, ಪಕ್ಷದ ಪ್ರಮುಖರಾದ ಗೋಪಾಲಕೃಷ್ಣ ಹೇರಳೆ, ನಿತೀಶ್ ಶಾಂತಿವನ, ರಾಜೇಶ್ ಬನ್ನೂರು, ಚಂದ್ರಶೇಖರ ರಾವ್ ಬಪ್ಪಳಿಗೆ, ಮಣಿಕಂಠ, ವಿಶ್ವನಾಥ ಕುಲಾಲ್, ವಾಮನ್ ಪೈಯವರ ಪುತ್ರ ನರಸಿಂಹ ಪೈ ಹಾಗೂ ಕುಟುಂಬಸ್ಥರು ಇದ್ದರು.