ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ವಾಜಪೇಯಿ ಜನ್ಮದಿನಾಚರಣೆ

| Published : Dec 26 2023, 01:32 AM IST

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ವಾಜಪೇಯಿ ಜನ್ಮದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಜಿಲ್ಲಾ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಿ ಅಟಲ್ಲ್‌ ಬಿಹಾರಿ ವಾಜಪೇಯಿ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಉಡುಪಿಅಜಾತಶತ್ರು ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವನ್ನು ಜಿಲ್ಲಾ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವನ್ನು ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ ಆರಂಭಿಸಲಾಯಿತು.

ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ. ಶೆಟ್ಟಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಂಚಾಲಕ ಪಾಂಡುರಂಗ ಲಾಗ್ವಂಕರ್, ಪ್ರಮುಖರಾದ ಸುಭಾಷಿತ್ ಕುಮಾರ್, ಚಿನ್ಮಯ್, ಶಾಂತಿ ಮನೋಜ್, ಶಶಿಕಲಾ, ಅಶ್ವಿನಿ ಶೆಟ್ಟಿ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.