ದೇಶಕ್ಕೆ ಮಾದರಿ ಆಡಳಿತ ನೀಡಿದ್ದ ವಾಜಪೇಯಿ

| Published : Dec 26 2023, 01:33 AM IST

ಸಾರಾಂಶ

ದೇಶಕ್ಕೆ ಮಾದರಿಯ ಆಡಳಿತ ನೀಡಿದ ವಾಜಪೇಯಿ ಅವರು ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಆಡಳಿತದಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ ದೇಶದ ಪ್ರಗತಿಗಾಗಿ ಅಪಾರವಾಗಿ ಶ್ರಮಿಸಿದರು.

ಬಳ್ಳಾರಿ: ನಗರದ ಜಿಲ್ಲಾ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಪ್ರಮುಖರು ಹಾಗೂ ಕಾರ್ಯಕರ್ತರು, ಮಾಜಿ ಪ್ರಧಾನಿ ವಾಜಪೇಯಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ದೇಶಕ್ಕೆ ಮಾದರಿಯ ಆಡಳಿತ ನೀಡಿದ ವಾಜಪೇಯಿ ಅವರು ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಆಡಳಿತದಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ ದೇಶದ ಪ್ರಗತಿಗಾಗಿ ಅಪಾರವಾಗಿ ಶ್ರಮಿಸಿದರು ಎಂದು ಸ್ಮರಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ ಹಾಗೂ ರಾಜ್ಯ ರೈತ ಮೋರ್ಚಾ ಪ್ರಧಾನಿ ಕಾರ್ಯದರ್ಶಿ ಎಸ್. ಗುರುಲಿಂಗನಗೌಡ ಅವರು ವಾಜಪೇಯಿ ಅವರು ಸೇವೆಯನ್ನು ಕೊಂಡಾಡಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಮೋಕಾ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಪ್ಪ, ಎಚ್. ಹನುಮಂತಪ್ಪ, ಜಿಲ್ಲಾ ಉಪಾಧ್ಯಕ್ಷ ಯರ್ರಂಗಳಿ ತಿಮ್ಮಾರೆಡ್ಡಿ, ವೀರಶೇಖರ ರೆಡ್ಡಿ, ಕೆ.ಎ. ರಾಮಲಿಂಗಪ್ಪ, ಅಂಜಿ ಕಮ್ಮರಚೇಡು ಮತ್ತಿತರರಿದ್ದರು.

ಬಿಜೆಪಿ ಕಚೇರಿಯಲ್ಲಿ ವಾಜಪೇಯಿ ಜನ್ಮದಿನಾಚರಣೆ

ಹೊಸಪೇಟೆ: ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನವನ್ನು ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಮಂಡಳ ಅಧ್ಯಕ್ಷ ಕಸಾಟಿ ಉಮಾಪತಿ, ನಗರಸಭೆ ಸದಸ್ಯರಾದ ತಾರಿಹಳ್ಳಿ ಜಂಬುನಾಥ, ಹನುಮಂತಪ್ಪ ಬುಜ್ಜಿ, ಕಿರಣ್‌ ಶಂಕ್ರಿ, ರಮೇಶ್ ಗುಪ್ತ, ಜೀವರತ್ನಂ, ಮುಖಂಡರಾದ ರಾಜಶೇಖರ್‌, ಸುನೀಲ್, ಸಂದೀಪ್ ಸಿಂಗ್, ಎ. ಪರಶುರಾಮ, ದ್ವಾರಕೀಶ್‌, ಜಗದೀಶ್‌ ಕಾಮಟಗಿ ಮತ್ತಿತರರು ಪಾಲ್ಗೊಂಡಿದ್ದರು.