ಚನ್ನಪಟ್ಟಣ: ಕೆಂಪೇಗೌಡ ಬಸ್ ನಿಲ್ದಾಣದಿಂದ ರಾಮನಗರಕ್ಕೆ ಈಗಾಗಲೇ ಸಂಚರಿಸುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಜ್ರ ವಿಸ್ತಾರ ಹವಾ ನಿಯಂತ್ರಿತ ಸಾರಿಗೆ ಬಸ್‌ಗಳನ್ನು ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಚನ್ನಪಟ್ಟಣದವರೆಗೆ ವಿಸ್ತರಿಸಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು

ಚನ್ನಪಟ್ಟಣ: ಕೆಂಪೇಗೌಡ ಬಸ್ ನಿಲ್ದಾಣದಿಂದ ರಾಮನಗರಕ್ಕೆ ಈಗಾಗಲೇ ಸಂಚರಿಸುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಜ್ರ ವಿಸ್ತಾರ ಹವಾ ನಿಯಂತ್ರಿತ ಸಾರಿಗೆ ಬಸ್‌ಗಳನ್ನು ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಚನ್ನಪಟ್ಟಣದವರೆಗೆ ವಿಸ್ತರಿಸಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೆಂಪೇಗೌಡ ಬಸ್ ನಿಲ್ದಾಣ-ರಾಮನಗರಕ್ಕೆ ಸಂಚರಿಸುತ್ತಿದ್ದ ವಜ್ರ ವಿಸ್ತಾರ ಹವಾನಿಯಂತ್ರಿತ ಸಾರಿಗೆ ಸೇವೆಯನ್ನು ಚನ್ನಪಟ್ಟಣದವರೆಗೆ ವಿಸ್ತರಿಸಿದ ಮಾರ್ಗಗಳನ್ನು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಜತೆ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರಿಗೆ ಗುಣಮಟ್ಟದ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ೫೦ ಘಟಕಗಳಿಂದ ವಿವಿಧ ಮಾದರಿಯ ಬಸ್ಸುಗಳಲ್ಲಿ ಪ್ರತಿದಿನ ೬,೨೭೫ ಅನುಸೂಚಿಗಳಿಂದ ೬೫,೯೫೨ ಸುತ್ತುವಳಿಗಳನ್ನು ೧೩.೦೬ ಲಕ್ಷ ಕಿ.ಮೀ ಗಳಲ್ಲಿ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದ್ದು, ಸರಾಸರಿ ೪೫ ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಅನುಸೂಚಿಗಳಲ್ಲಿ ೧,೭೫೭ ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ನಾಗೇಶ್, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪ್ರಮೋದ್, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಎಸ್.ಗಂಗಾಧರ್, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬೋರ್‌ವೆಲ್ ರಂಗನಾಥ್, ಹಾಪ್‌ಕಾಮ್ಸ್ ನಿರ್ದೇಶಕ ಪ್ರದೀಪ್ ಕುಮಾರ್, ನಗರಸಭೆ ಅಧ್ಯಕ್ಷ ನಾಗೇಶ್, ನಗರಸಭೆ ಮಾಜಿ ಅಧ್ಯಕ್ಷ ವಾಸೀಲ್ ಅಲಿಕಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ಸಾರಿಗೆ ಅಧಿಕಾರಿ ಪುರುಷೋತ್ತಮ್ ಮುಖಂಡರಾದ ಮಲುವೇಗೌಡ, ಕರಣ್ ಆನಂದ್, ಚಂದ್ರಸಾಗರ್ ಇತರರಿದ್ದರು.

ಪೊಟೋ೮ಸಿಪಿಟಿ೨:

ಚನ್ನಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಜ್ರ ವಿಸ್ತಾರ ಹವಾನಿಯಂತ್ರಿತ ಸಾರಿಗೆ ಸೇವೆಗೆ ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.