ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಕಾಪು ಪ್ರ.ದರ್ಜೆ ಕಾಲೇಜಿನಲ್ಲಿ ಶನಿವಾರ ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆಯಲ್ಲಿ ಸಂಪನ್ನಗೊಂಡಿತು.
ಕಾಪು: ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಕಾಪು ಪ್ರ.ದರ್ಜೆ ಕಾಲೇಜಿನಲ್ಲಿ ಶನಿವಾರ ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆಯಲ್ಲಿ ಸಂಪನ್ನಗೊಂಡಿತು. ಸರ್ವಾಧ್ಯಕ್ಷರಾಗಿದ್ದ ಡಾ.ವೈ.ಎನ್.ಶೆಟ್ಟಿ ಇವರು ಪ್ರತಿಸ್ಪಂದನೆಯ ನುಡಿಗಳನ್ನಾಡಿ ಸಮ್ಮೇಳನವನ್ನು ವಿದ್ವತ್ಪೂರ್ಣವಾಗಿ ಸಂಘಟಿಸಿದ ಕಸಾಪ ತಾಲೂಕು ಸಮಿತಿಯನ್ನು ಅಭಿನಂದಿಸಿದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಅದಾನಿ ಯುಪಿಸಿಎಲ್ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್ ಆಳ್ವ ಸನ್ಮಾನಿಸಿದರು. ನಿವೃತ್ತ ಪ್ರಾಚಾರ್ಯ ಡಾ, ಎಲ್ಲೂರು ರವೀಂದ್ರನಾಥ್ ರಾವ್ ಎಲ್ಲೂರು ಸಮಾರೋಪ ಭಾಷಣ ಮಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ, ಕಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಪಡುಬಿದ್ರಿ, ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಗೋಪಾಲಕೃಷ್ಣ ಗಾಂವ್ಕರ್, ಜಿಲ್ಲಾ ಸಮಿತಿ ಪ್ರತಿನಿಧಿ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಕೋಶಾಧಿಕಾರಿ ವಿದ್ಯಾಧರ್ ಪುರಾಣಿಕ್, ಸಂಘಟನಾ ಕಾರ್ಯದರ್ಶಿಗಳಾದ ದೀಪಕ್ ಬೀರ, ಕೆ.ಆರ್.ಪಾಟ್ಕರ್ ವೇದಿಕೆಯಲ್ಲಿದ್ದರು. ಕಸಾಪ ಸಹಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು ಸ್ವಾಗತಿಸಿದರು. ದೇವದಾಸ ಪಾಟ್ಕರ್ ನಿರೂಪಿಸಿದರು. ಗೌ.ಕಾರ್ಯದರ್ಶಿ ನೀಲಾನಂದ ನಾಯ್ಕ್ ವಂದಿಸಿದರು ಈವರೆಗೆ ನಡೆದ ಎಂಟು ಸಾಹಿತ್ಯ ಸಮ್ಮೇಳನಗಳ ಕಾರ್ಯಾಧ್ಯಕ್ಷರು, ಪ್ರಧಾನಕಾರ್ಯದರ್ಶಿಗಳನ್ನು ಸನ್ಮಾನಿಸಲಾಯಿತು.