ವಿದ್ಯಾರ್ಥಿಗಳಿಗೆ ಉತ್ತಮ ವಿಚಾರಗಳನ್ನು ಮನದಟ್ಟು ಮಾಡಿಸುವಂತಹ ಕಾರ್ಯ ಉಪನ್ಯಾಸಕರಿಂದ ಆಗಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಹೇಳಿದರು.

ಪುತ್ತೂರು : ವಿದ್ಯಾರ್ಥಿಗಳಿಗೆ ಉತ್ತಮ ವಿಚಾರಗಳನ್ನು ಮನದಟ್ಟು ಮಾಡಿಸುವಂತಹ ಕಾರ್ಯ ಉಪನ್ಯಾಸಕರಿಂದ ಆಗಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಅಧ್ಯಾಪಕರ ಅಭಿವೃದ್ಧಿ ಘಟಕ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಘಟಕದಿಂದ ಉಪನ್ಯಾಸಕರಿಗಾಗಿ ಆಯೋಜಿಸಿರುವ ದೃಷ್ಟಿ- ಉಪನ್ಯಾಸಕ ಅಭಿವೃದ್ಧಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಉದ್ಯೋಗಗಳು ದೊರೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಐದು ದಿವಸದ ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ವಿಚಾರಗಳ ಬಗ್ಗೆ ಉಪನ್ಯಾಸ ನಡೆಯಿತು. ಪರಿಣಾಮಕಾರಿ ಸಂವಹನ ಮತ್ತು ತರಗತಿ ನಿರ್ವಹಣೆಯ ಬಗ್ಗೆ ಮಂಗಳೂರು ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಅಧ್ಯಾಪಕ ಡಾ. ಕುಮಾರಸ್ವಾಮಿ ಎಚ್, ಹದಿಹರೆಯದವರನ್ನು ಅರ್ಥಮಾಡಿಕೊಳ್ಳುವ ವಿಚಾರದ ಕುರಿತು ಮಕ್ಕಳ ತಜ್ಞೆ ಡಾ. ಸುಲೇಖಾ ವರದರಾಜ್, ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗುವುದರ ಕುರಿತು ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಅರುಣ್ ಪ್ರಕಾಶ್, ಬೋಧನೆಯಲ್ಲಿ ಕೃತಕ ಬುದ್ಧಿಮತ್ತೆ: ಸಾಧ್ಯತೆಗಳು ಮತ್ತು ಸವಾಲುಗಳ ಕುರಿತು ಮಂಗಳೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಹರೀಶ್ ಪಿ, ಸಂಶೋಧನೆ ಮತ್ತು ಪ್ರಕಟಣೆ ಈ ವಿಷಯದ ಬಗೆಗೆ ನಿವೃತ್ತ ಪ್ರಾಂಶುಪಾಲ, ಅರ್ಥಶಾಸ್ತ್ರ ಪ್ರಾಧ್ಯಾಪಕ ಹಾಗೂ ಅಂತರಾಷ್ಟ್ರೀಯ ಅರ್ಥಶಾಸ್ತ್ರಜ್ಞರು ಮತ್ತು ಪುತ್ತೂರು ಸೇಂಟ್ ಫಿಲೋಮಿನಾ ಕಾಲೇಜಿನ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕ ಡಾ. ಪಿ.ಎಸ್ ರಾಧಾಕೃಷ್ಣ ಐಕ್ಯೂ ಎಸಿ ಮತ್ತು ನ್ಯಾಕ್ ಕುರಿತು ಒಂದು ಅವಲೋಕನದ ಬಗೆಗೆ ಹಾಗೂ ವಿವೇಕಾನಂದ ಕಾಲೇಜಿನ ಐಕ್ಯೂ ಎಸಿ ಸಂಯೋಜಕಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ಪ್ರಯೋಗಾಲಯ ಸಹಾಯಕ ದಿನೇಶ್, ವೃತ್ತಿ ನೈತಿಕತೆಯ ಕುರಿತು ನಿವೃತ್ತ ಸಂಸ್ಕೃತ ಉಪನ್ಯಾಸಕ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಕಾರ್ಯಗಾರವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗೂ ವಿಶೇಷ ಅಧಿಕಾರಿ, ಶಿಕ್ಷಕರ ಅಭಿವೃದ್ಧಿ ಡಾ. ವಿದ್ಯಾ ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ನಿರ್ವಹಿಸಿದರು.