ಪೂರ್ವ ವಲಯ ವ್ಯಾಪ್ತಿಯಲ್ಲಿ ಶುಕ್ರವಾರ, ಶನಿವಾರ 8ನೇ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟವನ್ನು ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ದಾವಣಗೆರೆಪೂರ್ವ ವಲಯ ವ್ಯಾಪ್ತಿಯಲ್ಲಿ ಶುಕ್ರವಾರ, ಶನಿವಾರ 8ನೇ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟವನ್ನು ಆಯೋಜಿಸಲಾಗಿತ್ತು. ಶನಿವಾರ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು, ವಿವಿಧ ಪೊಲೀಸ್ ಕರ್ತವ್ಯ ಕೂಟದ ಸ್ಪರ್ದೇಗಳಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳಿಗೆ ಪೊಲೀಸ್ ಅಧೀಕ್ಷಕ ಎಚ್.ಟಿ.ಶೇಖರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.ಪೂರ್ವ ವಲಯ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೆಚ್ಚಿನ ಅಂಕಗಳನ್ನು ಪಡೆದು ದಾವಣಗೆರೆ ಜಿಲ್ಲಾ ಪೊಲೀಸ್ ತಂಡ ಸಮಗ್ರ ಪಶಸ್ತಿಗೆ ಭಾಜನವಾಯಿತು.ಶ್ವಾನದಳದ ವಿವಿಧ ಸ್ಪರ್ಧೆಯಲ್ಲಿ ಪೂರ್ವ ವಲಯ ಮಟ್ಟದ ಬೆಸ್ಟ್ ಡಾಗ್ ಕೀರ್ತಿಗೆ ದಾವಣಗೆರೆ ಜಿಲ್ಲಾ ಪೊಲೀಸ್ ಶ್ವಾನದಳ “ಧೃತಿ” ಶ್ವಾನವು ಭಾಜನವಾಯಿತು.ಕಾರ್ಯಕ್ರಮದಲ್ಲಿ ಪೂರ್ವ ವಲಯದ ಪೊಲೀಸ್ ಕರ್ತವ್ಯ ಕೂಟದ ನೂಡಲ್ ಅಧಿಕಾರಿ ರುದ್ರೇಶ್, ಆರ್‌ಎಫ್‌ಎಸ್‌ಎಲ್ ನ ಉಪ ನಿರ್ದೇಶಕರಾದ ಡಾ.ಛಾಯಕುಮಾರಿ, ಪೂರ್ವಲಯದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.