ಸಾರಾಂಶ
ಶಿಗ್ಗಾಂವ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ, ಐಕ್ಯತೆ, ಸಾಮರಸ್ಯ ದೇಶದಲ್ಲಿ ಶಾಶ್ವತವಾಗಿ ನೆಲೆ ನಿಂತಿದೆ. ದೇಶವನ್ನು ಆಡಳಿತಾತ್ಮಕವಾಗಿ ಮತ್ತು ಸಾಂಸ್ಕೃತಿಕವಾಗಿ ಒಗ್ಗೂಡಿಸಲು ಅವರ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಅವರು ಹೇಳಿದರು.ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಆಯೋಜಿಸಲಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮದ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.ದೇಶದ ಭದ್ರತೆ ಮತ್ತು ಐಕ್ಯತೆಯ ದೃಷ್ಟಿಯಿಂದ ದೇಶ ಸೇವೆಗಾಗಿ ಶಕ್ತಿ ನಿಯೋಗಿಸಿರುವ ಅವರು ಸಾಂವಿಧಾನಿಕ ಹಿನ್ನೆಲೆಯಲ್ಲಿ ನಮಗೆಲ್ಲ ಮಾದರಿಯಾಗುವ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಜನ್ಮದಿನವನ್ನು ಐಕ್ಯತೆಯ, ಸಾಮರಸ್ಯದ ದಿನವಾಗಿ ಆಚರಿಸುತ್ತೇವೆ ಎಂದರು.ಸಹಾಯಕ ಪ್ರಾಧ್ಯಾಪಕ ಡಾ. ಚಂದ್ರಪ್ಪ ಸೊಬಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಶಿವಾನಂದ ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿದರು, ಅಧೀಕ್ಷಕ ಬಸವರಾಜ ಜವಳಗಟ್ಟಿ ಸ್ವಾಗತಿಸಿದರು. ಜನಪದ ಕಲಾವಿದ ಹಾಗೂ ಕಿರಿಯ ಸಹಾಯಕ ಶರೀಫ ಮಾಕಪ್ಪನವರ ಪ್ರಾರ್ಥಿಸಿದರು. ಸಹಾಯಕ ಗ್ರಂಥಪಾಲಕ ಶಂಕರಗೌಡ ಮಾಲೀಪಾಟೀಲ ವಂದಿಸಿದರು.ನಂತರ ವಿಶ್ವವಿದ್ಯಾಲಯದ ಆವರಣದಲ್ಲಿ ಸಸಿ ನೆಡಲಾಯಿತು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.