ಸಾರಾಂಶ
- ಯಾವುದೇ ಹೊಸ ಖಾತೆ ತೆರೆಯಲು ಹಣಕಾಸು ಇಲಾಖೆ ಒಪ್ಪಿಗೆ ಬೇಕು
- ಬಹುತೇಕ ಕಡೆ ಕೊಲೆಗಳಾಗುತ್ತಿದ್ದು, ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕುಸಿದಿದೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು.ಗಳ ಅವ್ಯವಹಾರ, ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಒತ್ತಾಯಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವು ವಿವಿಧ ಖಾತೆಗಳಿಗೆ ವರ್ಗಾವಣೆ ಆಗಿರುವುದು, ಹೊಸದಾಗಿ ಖಾತೆಗಳನ್ನು ತೆರೆದಿರುವ ಮಾಹಿತಿ ಇದೆ. ಯಾವುದೇ ಹೊಸ ಖಾತೆ ತೆರೆಯಲು ಹಣಕಾಸು ಇಲಾಖೆ ಒಪ್ಪಿಗೆ ಬೇಕು. ಹಣಕಾಸು ಇಲಾಖೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಯೇ ಇದೆ. ಹಾಗಾಗಿ, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.ಕಾನೂನು ಸುವ್ಯವಸ್ಥೆ ಕುಸಿತ:
ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಕಡೆ ಕೊಲೆಗಳಾಗುತ್ತಿವೆ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಆತಂಕ ವ್ಯಕ್ತಪಡಿಸಿದರು.ಈ ಹಿಂದೆ ವಿಧಾನಸಭೆಯಲ್ಲಿ ಇನ್ಫೋಸಿಸ್ ಸಂಸ್ಥೆಯವರು ಧಾರವಾಡದಲ್ಲಿ ಜಮೀನು ಪಡೆದು ಕಾಮಗಾರಿ ಆರಂಭಿಸಿಲ್ಲ ಎಂಬ ವಿಚಾರ ನಾನೇ ಪ್ರಸ್ತಾಪ ಮಾಡಿದ್ದೆ. ಈಗ ಅಲ್ಲಿ ಸಿಬ್ಬಂದಿ ನೇಮಕಕ್ಕೆ ಮುಂದಾಗಿದೆ. ಏನು ಮಾಡುತ್ತದೆ ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ದೇಶದೆಲ್ಲೆಡೆ ನೀಟ್ ಚರ್ಚೆ ನಡೆಯುತ್ತಿದೆ. ಅದರ ಹಿಂದೆಯೇ ವೈದ್ಯಕೀಯ ಕಾಲೇಜು ನಡೆಸುವವರ ಹುನ್ನಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಮೊದಲೂ ನೀಟ್ ಪರೀಕ್ಷೆ ಪತ್ರಿಕೆ ಲೀಕ್ ಮಾಡಿದ್ದು, ನಂತರ ಕೆಲವಾರು ವಿಚಾರಗಳನ್ನು ಹೆಚ್ಚಾಗಿಯೇ ಬಿಂಬಿಸುವ ವ್ಯವಸ್ಥೆ ನಡೆಯುತ್ತಿದೆ ಎಂದು ದೂರಿದರು.ಪ್ರಧಾನಿ ನರೇಂದ್ರ ಮೋದಿ ನೀಟ್ ವಿಚಾರದ ಬಗ್ಗೆ ಗಮನ ಹರಿಸಿದ್ದಾರೆ. ಸಂಬಂಧಿಸಿದ ಸಚಿವರಿಗೂ ಪ್ರಧಾನಿ ಸೂಚನೆ ನೀಡಿದ್ದಾರೆ. ನೀಟ್‌ನಲ್ಲಿ ಎಲ್ಲ ಸರಿಯಿದೆ ಎನ್ನುವುದಕ್ಕೂ ಆಗುವುದಿಲ್ಲ. ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಾಡಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
- - - -ಫೋಟೋ:ಅರವಿಂದ ಬೆಲ್ಲದ