ಸಾರಾಂಶ
ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ.
ಕಲಘಟಗಿ:
ದೇಶದಲ್ಲಿ ಸಂಸ್ಕೃತಿ, ಧಾರ್ಮಿಕತೆ ಆಚಾರ-ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕಾರಣವೆಂದು ತಹಸೀಲ್ದಾರ್ ವೀರೇಶ ಮುಳಗುಂದಮಠ ಹೇಳಿದರು.ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯೋಗದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಮಾತನಾಡಿದರು.ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ.
ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.ತಾಪಂ ಇಒ ಪರಶುರಾಮ ಸಾವಂತ್ ಮಾತನಾಡಿ, ವಾಲ್ಮೀಕಿ ಅವರ ಬದುಕು, ಸಾಧನೆ ಎಲ್ಲರಿಗೂ ಪ್ರೇರಣೆಯಾಗಿದೆ. ಯುವಜನತೆ ಅವರ ಸಾಧನೆ ಅರಿತು ಉತ್ತಮ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎ.ಜೆ. ಯೋಗಪ್ಪನವರ, ರಾಜಶೇಖರ ಕುಂಬಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ಬಿಜೆಪಿ ತಾಲೂಕಾಧ್ಯಕ್ಷ ಯಲ್ಲಾರಿ ಶಿಂಧೆ, ವಾಲ್ಮೀಕಿ ಸಮಾಜದ ತಾಲೂಕಾಧ್ಯಕ್ಷ ಫಕ್ಕೀರಗೌಡ ದೊಡ್ಡಮನಿ, ಸಿದ್ದಪ್ಪ ತಳವಾರ, ಭೀಮಣ್ಣ ಬ್ಯಾಡರಕೊಪ್ಪ, ವಿರೂಪಾಕ್ಷಿ ಮದ್ನೂರ, ಫಕೀರೇಶ ಅಪ್ಪಣ್ಣವರ ಎಸ್.ಎಚ್. ಭಜಂತ್ರಿ, ಶಶಿಧರ ಕಟ್ಟಿಮನಿ, ಮಂಜುನಾಥ ವಾಲಿಕಾರ, ಬಸವರಾಜ ದ್ವಾರಕೂಜಿ, ಚಂದ್ರು ತಳವಾರ, ಸುಭಾಷ ಸುಣಗಾರ, ಉದಯ ಗೌಡರ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.