ದಾಬಸ್‍ಪೇಟೆ: ಆದಿಕವಿ ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ವಾಲ್ಮೀಕಿ ಸೇರಿದಂತೆ ಮಹಾನ್ ಪುರುಷರ ಜಯಂತಿ ಆಚರಣೆ ಸಾರ್ಥಕತೆ ಪಡೆಯುತ್ತದೆ ಎಂದು ಮುಖ್ಯಶಿಕ್ಷಕಿ ಜಯಶ್ರೀ ತಿಳಿಸಿದರು

ದಾಬಸ್‍ಪೇಟೆ: ಆದಿಕವಿ ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ವಾಲ್ಮೀಕಿ ಸೇರಿದಂತೆ ಮಹಾನ್ ಪುರುಷರ ಜಯಂತಿ ಆಚರಣೆ ಸಾರ್ಥಕತೆ ಪಡೆಯುತ್ತದೆ ಎಂದು ಮುಖ್ಯಶಿಕ್ಷಕಿ ಜಯಶ್ರೀ ತಿಳಿಸಿದರು.ನೆಲಮಂಗಲ ತಾಲೂಕಿನ ಹಂದಿಗುಟ್ಟೆ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು. ಭಗವಂತ ಶ್ರೀರಾಮನನ್ನು ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ದರ್ಶನ ಮಾಡಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಇಂತಹ ಮಹಾನ್ ಕವಿಯ ಆಚಾರ ವಿಚಾರಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದರು.

ಶಿಕ್ಷಕಿ ಜಯಲಕ್ಷ್ಮಮ್ಮ ಮಾತನಾಡಿ ರಾಮಾಯಣ ಮತ್ತು ಮಹಾಭಾರತ ಕಾವ್ಯಗಳು ಕೇವಲ ಮಹಾಕಾವ್ಯವಲ್ಲ ಅವುಗಳು ವಿಶ್ವಮಟ್ಟದಲ್ಲಿ ಭಾರತದ ಮಹತ್ವ ಸಾರುವ ಶ್ರೇಷ್ಠ ಗ್ರಂಥಗಳಾಗಿವೆ. ವಾಲ್ಮೀಕಿ ಸಮುದಾಯಕ್ಕೆ ಸೇರಿದ ಅನೇಕ ರಾಜ-ಮಹಾರಾಜರು ಸ್ವಾತಂತ್ರ್ಯ ಪೂರ್ವದಲ್ಲಿ ಆಳ್ವಿಕೆ ನಡೆಸಿದ್ದಾರೆ. ಅದರಲ್ಲೂ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಈ ಸಮದಾಯದ ಪಾತ್ರ ಮರೆಯುವಂತಿಲ್ಲ ಎಂದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

ಪೋಟೋ 7 : ನೆಲಮಂಗಲ ತಾಲೂಕಿನ ಹಂದಿಗುಟ್ಟೆ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಶ್ರೀ, ಸಹಶಿಕ್ಷಕಿ ಜಯಲಕ್ಷ್ಮಮ್ಮ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿರುವುದು