ವಾಲ್ಮೀಕಿ ರಾಮಾಯಣ ಇಂದಿಗೂ ಪ್ರಸ್ತುತ: ಯಾಸೀರ್ ಅಹ್ಮದಖಾನ್ ಪಠಾಣ

| Published : Oct 09 2025, 02:01 AM IST

ಸಾರಾಂಶ

ಸವಣೂರು ಪಟ್ಟಣದ ಚನ್ನಬಸವ ಮಂಗಲ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಉದ್ಘಾಟಿಸಿದರು.

ಸವಣೂರು: ಮಹರ್ಷಿ ವಾಲ್ಮೀಕಿ ಅವರು ರಾಮಾಯಣವನ್ನು ರಚಿಸುವ ಮೂಲಕ ಶ್ರೀರಾಮಚಂದ್ರ ಸೀತಾಮಾತೆ ಹಾಗೂ ಆಂಜನೇಯನನ್ನು ಈ ಜಗತ್ತಿಗೆ ಪರಿಚಯಿಸಿದ ಮಹಾನ್ ತತ್ವಜ್ಞಾನಿಯಾಗಿದ್ದಾರೆ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು.

ಪಟ್ಟಣದ ಚನ್ನಬಸವ ಮಂಗಲ ಭವನದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಅನೇಕರು ರಾಮಾಯಣ ಬರೆದಿದ್ದಾರೆ. ಆದರೆ, ಮಹರ್ಷಿ ವಾಲ್ಮೀಕಿ ಅವರು ಬರೆದದ್ದು ಶ್ರೇಷ್ಠ ರಾಮಾಯಣ ಮಹಾಕಾವ್ಯವಾಗಿದ್ದು, ಅಂದಿನಿಂದ ಇಂದಿನ ವರೆಗೆ ಪ್ರಸ್ತುತವಾಗಿದೆ. ಮಹರ್ಷಿ ಅವರ ಮಹಾಕಾವ್ಯದಲ್ಲಿ ಅನೇಕ ನೀತಿ ಕಥನಗಳನ್ನು ನಾವು ಕಾಣಬಹುದಾಗಿದೆ. ಅವರು ತೋರಿದ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ. ಅವರ ತತ್ವ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇ ಆದರೆ ನಮ್ಮ ಜೀವನ ಸಾರ್ಥಕಗೊಳ್ಳಲಿದೆ ಎಂದರು.

ಇದಕ್ಕೂ ಪೂರ್ವದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗಿದ್ದ ಮಹರ್ಷಿ ವಾಲ್ಮೀಕಿ ಬೃಹತ್ ಭಾವಚಿತ್ರ ಮೆರವಣಿಗೆಯಲ್ಲಿ ಶಾಸಕ ಪಠಾಣ ಟ್ರ‍್ಯಾಕ್ಟರ್ ಚಾಲನೆ ಮಾಡಿ, ಡೊಳ್ಳು ಬಡಿಯುವ ಮೂಲಕ ಜನರಲ್ಲಿ ಉತ್ಸಾಹ ತುಂಬಿದರು.

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕಾಧ್ಯಕ್ಷ ಶ್ರೀಧರ ದೊಡ್ಡಮನಿ, ಉಪವಿಭಾಗಾಧಿಕಾರಿ ಶುಭಂ ಶುಕ್ಲಾ, ತಹಸೀಲ್ದಾರ್‌ ರವಿಕುಮಾರ ಕೊರವರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಬಿ. ಶಿಡೇನೂರ, ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ನಾಗಪ್ಪ ತಿಪ್ಪಕ್ಕನವರ, ಗ್ಯಾರಂಟಿ ಜಿಲ್ಲಾ ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ತಾಲೂಕು ಅಧ್ಯಕ್ಷ ಸುಭಾಸ್ ಮಜ್ಜಗಿ, ಗಿರೀಶ ತಳವಾರ, ಬ್ಲಾಕ್ ಅಧ್ಯಕ್ಷ ಎಂ.ಜೆ. ಮುಲ್ಲಾ, ಕೆಡಿಪಿ ಸದಸ್ಯ ರವಿ ಕರಿಗಾರ, ಪ್ರಮುಖರಾದ ಶ್ರೀಕಾಂತ ವಾಲ್ಮೀಕಿ, ಪಾಂಡಪ್ಪ ತಿಪ್ಪಕ್ಕನವರ, ಉಮೇಶ, ಮಾಲತೇಶ ಹೊಳೆಮ್ಮನವರ, ವಕೀಲ ಎಂ.ಎನ್. ಬಸವನಾಯ್ಕರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜೀವನ ಪಮ್ಮಾರ ಇದ್ದರು.