ಪತ್ರಕರ್ತ ಜನಾರ್ದನ್​ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ

| Published : Oct 13 2025, 02:03 AM IST

ಪತ್ರಕರ್ತ ಜನಾರ್ದನ್​ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​​ - 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.​

ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.​

ಅವರು ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ​ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​​ - 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.​ ಸಂಸತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ ಅಧ್ಯಕ್ಷತೆ ವಹಿಸಿದ್ದರು. ​ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅಭಿನಂದನಾ ಮಾತುಗಳನ್ನಾಡಿದರು. ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ, ಕಸಾಪ ​ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್​ ಎಚ್​.ಪಿ., ಗ್ರಾಮೀಣ ಬ್ಯಾಂಕ್​ ಹಿರಿಯ ವ್ಯವಸ್ಥಾಪಕ ಕೆ. ರಾ​ಘವೇಂದ್ರ ಉಪಾಧ್ಯಾಯ, ಜಿಲ್ಲಾ ಕನಕದಾಸ ಸೇವಾ ಸಂ​ಘದ ನಿಕಟಪೂರ್ವ ಅಧ್ಯಕ್ಷ ಹನುಮಂತ ಆಡಿನ​, ಮಹರ್ಷಿ ವಾಲ್ಮೀಕಿ​ ಸಂಘದ ಗೋಪಾಲ್​ ದೇವದುರ್ಗ​ ಉಪಸ್ಥಿತರಿದ್ದರು.

​ಸಾಹಿತಿ ಡಾ. ನಿಕೇತನ ಉಪನ್ಯಾಸ ನೀಡಿದರು. ವಾಲ್ಮೀಕಿ ಸಂಘದ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸ್ವಾಗತಿಸಿದರು. ರಾ​ಘವೇಂದ್ರ ಪ್ರಭು ನಿರೂಪಿಸಿದರು. ರಾಜೇಶ್​ ಭಟ್​ ವಂದಿಸಿದರು.