ಬೋಧನೆ ಜತೆಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ

| Published : Sep 06 2025, 01:01 AM IST

ಬೋಧನೆ ಜತೆಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸ್ತುತ ಶಿಕ್ಷಕರು ಬೋಧನೆ ಜತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನದ ಮೌಲ್ಯ ಬೆಳೆಸುವತ್ತ ಗಮನ ಹರಿಸಬೇಕಿದೆ

ಧಾರವಾಡ: ವಿದ್ಯಾರ್ಥಿಗಳಿಗೆ ಬೋಧನೆ ಜತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡುವುದು ಇಂದಿನ ಅಗತ್ಯ. ಆ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಉತ್ತಮ ಚಿಂತನೆ ಮತ್ತು ‌ನೈತಿಕ ಮೌಲ್ಯ ಬೆಳೆಸುವಲ್ಲಿ ಶಿಕ್ಷಕರು ‌ಮುಂದಾಗಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎ.ಎಂ. ಖಾನ್ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಅವರು, ಪ್ರಸ್ತುತ ಶಿಕ್ಷಕರು ಬೋಧನೆ ಜತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನದ ಮೌಲ್ಯ ಬೆಳೆಸುವತ್ತ ಗಮನ ಹರಿಸಬೇಕಿದೆ. ಶಿಕ್ಷಕರು ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೂರಕವಾಗಿ ಉತ್ತಮ ಪ್ರಗತಿಪರ ‌ಚಿಂತನೆಗಳನ್ನು ಅವಶ್ಯಕತೆ ಇದ್ದು, ಶಿಕ್ಷಕನಾದವನಿಗೆ ಸಮಾಜದಲ್ಲಿ ಅತ್ಯುನ್ನತ ಸ್ಥಾನವಿದೆ. ಆದ್ದರಿಂದ ವಿಷಯದ ಬೋಧನೆ ಜತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆಡಳಿತ ಅಧಿಕಾರಿಗಳು, ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು.