ದಾಬಸ್‍ಪೇಟೆ: ಜೀವನದ ಉನ್ನತಿಗೆ ಧರ್ಮವೇ ದಿಕ್ಸೂಚಿ, ಕ್ರಿಯಾತ್ಮಕ ಸಾಧನೆಯಿಂದ ಪ್ರಗತಿ ಸಾಧ್ಯ. ಸಂಸ್ಕಾರದಿಂದ ಮೌಲ್ಯಾಧಾರಿತ ಬದುಕು ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಸೋಂಪುರ ಹೋಬಳಿಯ ಶಿವಗಂಗೆಯಲ್ಲಿ ಪ್ರಭಾವತಿಯವರ ನಿವಾಸದಲ್ಲಿ ಆಯೋಜಿಸಿದ್ದ ಇಷ್ಟಲಿಂಗ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ದಿವ್ಯಸಾನ್ನಿದ್ಯ ವಹಿಸಿ ಮಾತನಾಡಿದ ಶ್ರೀಗಳು, ಮಾನವೀಯ ಸಂಬಂಧಗಳು ಸಡಿಲಗೊಳ್ಳುತ್ತಿರುವ ಕಾರಣ ಸಮಸ್ಯೆಗಳು ತಲೆದೋರುತ್ತಿವೆ. ಇದರಿಂದಾಗಿ ಪರಸ್ಪರ ಸಂಘರ್ಷ, ಅತೃಪ್ತಿ ಮತ್ತು ಅಸಮಾಧಾನಗಳು ಹೆಚ್ಚುತ್ತಿವೆ. ಇದಕ್ಕೆಲ್ಲ ಕಾರಣ ಧಾರ್ಮಿಕ ಸಂಸ್ಕಾರದ ಕೊರತೆ ಎಂದರು.ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಆಧುನಿಕತೆ ವೈಚಾರಿಕತೆಗೆ ಮಾರು ಹೋಗಿ ಸಂಸ್ಕೃತಿ ಮರೆಯಬಾರದು. ಸ್ವಧರ್ಮ ಸಹಿಷ್ಣುತೆಯಿಂದ ಎಲ್ಲರೂ ಬಾಳಬೇಕು. ಕಷ್ಟಗಳನ್ನು ಎದುರಿಸಲು ಧೈರ್ಯ ಮತ್ತು ಸಹನೆಯ ಗುಣಗಳು ಅವಶ್ಯ. ಬದುಕು ಬಲಗೊಳ್ಳಲು ಗುರುವಿನ ಮಾರ್ಗದರ್ಶನ ಇರಬೇಕು ಎಂದರು.
ಕಾರ್ಯಕ್ರಮದಲ್ಲಿ ತಮ್ಮಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ವಕೀಲ ಮಹೇಶ್ ಕುಟುಂಬಸ್ಥರು, ಭಕ್ತಾದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.ಪೋಟೋ 1 :
ಶಿವಗಂಗೆಯಲ್ಲಿ ಪ್ರಭಾವತಿಯವರ ನಿವಾಸದಲ್ಲಿ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಇಷ್ಟಲಿಂಗ ಪೂಜೆಯಲ್ಲಿ ತೊಡಗಿರುವುದು.