ಸಾರಾಂಶ
ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳನ್ನು ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯನ್ನಾಗಿಸಿ, ಗೌರವಯುತ ಸ್ಥಾನದಲ್ಲಿ ಕೂರಿಸಬೇಕೆನ್ನುವುದು ಪ್ರತಿಯೊಬ್ಬ ತಂದೆ-ತಾಯಿಯರ ಕನಸಾಗಿರುತ್ತದೆ. ಹಾಗಾಗಿ ಶಿಕ್ಷಣವು ಮಕ್ಕಳಲ್ಲಿ ದೇಶಭಕ್ತಿ, ಶಿಸ್ತು, ಸಂಯಮ, ಸಂಸ್ಕಾರವನ್ನು ಸೃಷ್ಟಿಸುವುದರಿಂದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅವಶ್ಯಕತೆ ಇದೆ ಎಂದು ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ ನ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಜತ್ತಿ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳನ್ನು ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯನ್ನಾಗಿಸಿ, ಗೌರವಯುತ ಸ್ಥಾನದಲ್ಲಿ ಕೂರಿಸಬೇಕೆನ್ನುವುದು ಪ್ರತಿಯೊಬ್ಬ ತಂದೆ-ತಾಯಿಯರ ಕನಸಾಗಿರುತ್ತದೆ. ಹಾಗಾಗಿ ಶಿಕ್ಷಣವು ಮಕ್ಕಳಲ್ಲಿ ದೇಶಭಕ್ತಿ, ಶಿಸ್ತು, ಸಂಯಮ, ಸಂಸ್ಕಾರವನ್ನು ಸೃಷ್ಟಿಸುವುದರಿಂದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅವಶ್ಯಕತೆ ಇದೆ ಎಂದು ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ ನ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಜತ್ತಿ ಹೇಳಿದರು.ನಗರದ ಅಥಣಿ ರಸ್ತೆಯಲ್ಲಿರುವ ಘೇವರಚಂದ್ ಕಾಲೋನಿಯ ಯುರೋ ಕಿಡ್ಸ್ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಪಾಲಕರು ಮಕ್ಕಳ ಶಿಕ್ಷಣಕ್ಕಾಗಿ ಕೋಟಿಗಟ್ಟಲೆ ದುಡ್ಡು ಸುರಿಯುತ್ತಿದ್ದಾರೆ. ಆದರೆ ಇಂದಿನ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ. ಅದಕ್ಕಾಗಿ ಶಿಕ್ಷಣದ ಜೊತೆಗೆ ಮಕ್ಕಳಿಗೆ ಮೌಲ್ಯ ಶಿಕ್ಷಣವನ್ನು ಬೋಧಿಸಿದಾಗ ಮಾತ್ರ ಮಗು ಯಶಸ್ವಿ ಆಗಲು ಸಾಧ್ಯ ಎಂದು ಅವರು ಹೇಳಿದರು.ಯುರೋ ಕಿಡ್ಸ್ ಶಾಲೆಯ ನಿರ್ದೇಶಕ ಹಾಗೂ ಪ್ರತಿಷ್ಠಿತ ಶಿವಾಜಿ ಬ್ಯಾಂಕಿನ ವ್ಯವಸ್ಥಾಪಕ ಶ್ರೀ ಸಂಜಯ ಜಾಧವ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣು ಎನ್ನುವಂತೆ, ಇಂದಿನ ಮಕ್ಕಳೇ ನಾಳೆಯ ನಾಡಿನ ನಾಗರಿಕರು. ಮಗುವಿನ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರಷ್ಟೇ ಪಾತ್ರ ಪಾಲಕರದ್ದು ಇದೆ. ಕೇವಲ ಪರೀಕ್ಷೆಯಲ್ಲಿ ತೆಗೆದುಕೊಂಡ ಅಂಕಗಳ ಮೇಲೆ ಶೈಕ್ಷಣಿಕ ಪ್ರಗತಿ ಅಳೆಯದೇ, ಕಲಿಸಿದ ವಿಷಯ ಮಗುವಿಗೆ ಮನದಟ್ಟಾಗುವಂತೆ ಪಾಠ ಭೋಧಿಸಬೇಕು ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ರಾಜಕುಮಾರ ಲೇಔಟ್‌ನ ಅಧ್ಯಕ್ಷರಾದ ಜಿ.ಬಿ.ದೊಡ್ಡಿಮನಿ ಹಾಗೂ ಮಾಲಿಪಾಟೀಲ್ ಮಾತನಾಡಿದರು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.ಕಾರ್ಯಕ್ರಮವನ್ನು ಮಂಜುನಾಥ ಜುನಗೊಂಡ ನಿರೂಪಿಸಿ, ವಂದಿಸಿದರು. ಶಾಲೆಯ ಅಧ್ಯಕ್ಷ ಸತೀಶ ಶಿಂತ್ರೆ, ಡಾ. ಪ್ರಮೋದ ಪಾಟೀಲ್, ಬಸು ಬಿರಾದಾರ, ಮಾರುತಿ ಘೋರ್ಪಡೆ, ಮುಖ್ಯ ಶಿಕ್ಷಕಿ ಅಕ್ಷತಾ ಅಲಬಳ್ಳಿ, ಶಿಕ್ಷಕ ವೃಂದ, ಪಾಲಕರು ಮುದ್ದು ಮಕ್ಕಳು ಭಾಗವಹಿಸಿದ್ದರು.